ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಥಾ ಸ್ಪರ್ಧೆ: ಪ್ರಥಮ ಸ್ಥಾನ ಪಡೆದ ಕುಕ್ಕನೂರು ರೇಷ್ಮಾ ಮನೋಜ್‌

ಬಿ.ಎಸ್ ಗೋಪಾಲಕೃಷ್ಣ ದತ್ತಿಯ ಮುಕ್ತ ಕಥಾ ಸ್ಪರ್ಧೆಯಲ್ಲಿ 23 ಮಂದಿ ಭಾಗಿ
Published 17 ಮಾರ್ಚ್ 2024, 7:04 IST
Last Updated 17 ಮಾರ್ಚ್ 2024, 7:04 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿಯ ಮುಕ್ತ ಕಥಾ ಸ್ಪರ್ಧೆಯಲ್ಲಿ ಕುಶಾಲನಗರದ ಕುಕ್ಕನೂರು ರೇಷ್ಮಾ ಮನೋಜ್ ಪ್ರಥಮ, ನಾಪೋಕ್ಲಿನ ಮಧುಸೂಧನ್ ಬಿಳಿಗುಲಿ ದ್ವಿತೀಯ ಮತ್ತು ಮೂರ್ನಾಡಿನ ಕಿಗ್ಗಾಲು ಗಿರೀಶ್ ತೃತಿಯ ಸ್ಥಾನ ಪಡೆದಿದ್ದಾರೆ. ಇವರಿಗೆ ಮಾರ್ಚ್ 19ರಂದು ನಡೆಯುವ ದತ್ತಿ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಲಾಗುವುದು.

ಜಿಲ್ಲೆಯ 23 ಕತೆಗಾರರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ, ಪೊನ್ನಂಪೇಟೆ ತಾಲ್ಲೂಕು ಘಟಕ, ಬಾಳೆಲೆ ಹೋಬಳಿ ಘಟಕ ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ವತಿಯಿಂದ ದಿ.ಜಿ.ಗೋಪಾಲಕೃಷ್ಣ ದತ್ತಿನಿಧಿ ಕಾರ್ಯಕ್ರಮ ಹಾಗೂ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಮಾರ್ಚ್ 19ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಕಾರ್ಯಕ್ರಮವನ್ನು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ  ಅಳಮೇಂಗಡ ಬೋಸ್ ಮಂದಣ್ಣ ಉದ್ಘಾಟಿಸಲಿದ್ದು,  ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಡಿಞಾರಂಡ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಹಾಗೂ ದತ್ತಿದಾನಿಗಳಾದ   ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಭಾಗವಹಿಸಲಿದ್ದಾರೆ.

ವಿರಾಜಪೇಟೆಯ ಪತ್ರಕರ್ತೆ ಉಷಾ ಪ್ರೀತಂ ಕಥಾ ರಚನಾ ಕೌಶಲ್ಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಾಳಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುಕ್ಕಾಟಿರ ಜಾನಕಿ ಕಾವೇರಪ್ಪ, ಬಾಳೆಲೆಯ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಯನ್.ಕೆ.ಪ್ರಭು, ಬಾಳೆಲೆಯ ವಿಜಯಲಕ್ಷ್ಮಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ.ಚಂದ್ರಶೇಖರ್ ಭಾಗವಹಿಸಲಿದ್ದಾರೆ ಎಂದು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕೆ.ವಿ.ರಾಮಕೃಷ್ಣ ಮತ್ತು ಶೀಲಾ ಬೋಪಣ್ಣ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT