ಸೋಮವಾರಪೇಟೆ: ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 12ನೇ ದಿನಕ್ಕೆ ಕಾಲಿಟ್ಟಿದೆ.

ಸಂಘಟನೆಯ ಅಧ್ಯಕ್ಷ ಕೆ.ಮೊಣ್ಣಪ್ಪ ಮಾತನಾಡಿ, ‘ಮಾದಾಪುರ ಪಿಡಿಒ ಮಂಗಳವಾರ ಕೆಲವು ಮಾಹಿತಿಯನ್ನು ನೀಡಿದ್ದಾರೆ. ಬುಧವಾರ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ಧರಣಿ ನಡೆಸುತ್ತಿರುವ ಕುಂಬೂರು ಸ.ನಂ125/1 ಮತ್ತು 22/1 ಜಾಗದ ಸರ್ವೆ ಮಾಡಲು ಬರುವುದಾಗಿ ತಿಳಿಸಿದ್ದಾರೆ’ ಎಂದರು.

‘ಸರ್ವೆ ನಂ. 40/1 ರಲ್ಲಿ ಇರುವ 4.46 ಎಕರೆ ಪೈಸಾರಿ ಜಾಗವನ್ನು ಗಡಿ ಗುರುತಿಸಿ ಧರಣಿ ನಿರತರಿಗೆ ನಿವೇಶನ ನೀಡುವಂತೆ ಜಿಲ್ಲಾಧಿಕಾರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ತಾಲ್ಲೂಕಿನಲ್ಲಿರುವ ಪೈಸಾರಿ ಜಾಗವನ್ನು ಗುರುತಿಸಿ, ನಿವೇಶನ ರಹಿತ ಕಾರ್ಮಿರಿಗೆ ನಿವೇಶನ ನೀಡಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1671251822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.