ಸೋಮವಾರಪೇಟೆ: ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 7ನೇ ದಿನಕ್ಕೆ ಕಾಲಿರಿಸಿದೆ.

ಯಾವುದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡದ ಕಾರಣ, ಕಾರ್ಮಿಕ ಸಂಘಟನೆಯ ಅಧ್ಯಕ್ಷ ಕೆ.ಮೊಣ್ಣಪ್ಪ ನೇತೃತ್ವದಲ್ಲಿ ಪ್ರಮುಖರು ಜಿಲ್ಲಾಧಿಕಾರಿ ಭೇಟಿಯಾಗಿ ಪೈಸಾರಿ ಜಾಗದ ಪಟ್ಟಿ ಹಾಗೂ ಸರ್ಕಾರಿ ಜಾಗ ಒತ್ತುವರಿಯ ಬಗ್ಗೆ ಮಾಹಿತಿ ನೀಡಲು ಮಡಿಕೇರಿಗೆ ತೆರಳಿದ್ದರು. ಆದರೆ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಭ್ಯವಿರದ ಹಿನ್ನೆಲೆಯಲ್ಲಿ ವಾಪಸಾದರು.

ವಸತಿರಹಿತರು ಉಚಿತ ನಿವೇಶನ ಕೇಳುವುದು ನಮ್ಮ ಮೂಲಭೂತಹಕ್ಕು. ಸಂವಿಧಾನ ಕೊಟ್ಟ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಬಾರದು. ಸರ್ಕಾರಿ ಜಾಗವನ್ನು ಕಾನೂನುಬಾಹಿರವಾಗಿ ಒತ್ತುವರಿ ಮಾಡಿರುವುದು ಜಿಲ್ಲಾಡಳಿತಕ್ಕೂ ಗೊತ್ತಿದೆ. ಒತ್ತುವರಿ ಜಾಗವನ್ನು ತೆರವುಗೊಳಿಸಿ, ಅದನ್ನೇ ನಿವೇಶನ ರಹಿತರಿಗೆ ನೀಡುವುದು ಜಿಲ್ಲಾಡಳಿತ ಮುಂದಾಗಬೇಕು ಎಂದು ಮೊಣ್ಣಪ್ಪ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-51-1622036064

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.