ಕುಶಾಲನಗರ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸು ಸಾಧಿಸುವ ಮೂಲಕ ತಾವು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ಸಾಬೀತುಪಡಿಸುತ್ತಿರುವುದು ಅವರ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಟಿ.ಎಸ್.ಗಿರೀಶ್ ಹೇಳಿದರು.

ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಕ್ಷೇತ್ರದಲ್ಲೂ ಹೆಣ್ಣು ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ತಳಮಟ್ಟದಿಂದ ಮೇಲೆ ಬಂದು ಸಮಾಜದ ಎಲ್ಲಾ ಸ್ತರಗಳಲ್ಲಿ ಮಹಿಳೆಯರು ಬೆಳೆದಿದ್ದಾರೆ. ಮಹಿಳೆಯು ಮಾತೃ ಸ್ವರೂಪಿ, ತನ್ನ ಜೀವನದಲ್ಲಿ ಎಲ್ಲಾ ಹಂತದ ಕಷ್ಟಗಳನ್ನು ಸಹನೆಯಿಂದ ದಾಟಿಕೊಂಡು ಮುನ್ನಡೆಯುತ್ತಾಳೆ ಎಂದು ಬಣ್ಣಿಸಿದರು.

ಸಮುದಾಯ ಆರೋಗ್ಯ ಕೇಂದ್ರದ ದಂತವೈದ್ಯೆ ಡಾ.ಅಂಜಲಿ ಕೃಷ್ಣಯ್ಯ ಮಾತನಾಡಿ, ಪಿಸಿಪಿಎನ್ಡಿಟಿ ಕಾಯ್ದೆ, ಪೋಕ್ಸೊ ಕಾಯ್ದೆ, ನಶಾ ಮುಕ್ತ ಅಭಿಯಾನದ ಬಗ್ಗೆ ಹಾಗೂ ಅಂಗಾಂಗ ದಾನ ನೋಂದಣಿ ಮತ್ತು ಎಚ್.ಪಿ.ವಿ.ಲಸಿಕೆ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ಮಾತನಾಡಿ, ಮಹಿಳಾ ಸಬಲೀಕರಣ, ಶಿಕ್ಷಣ– ಆರೋಗ್ಯ, ಸಂವಿಧಾನಬದ್ಧ ಮಹಿಳೆಯರ ಹಕ್ಕುಗಳ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.

ಪುರಸಭೆ ಪೌರಕಾರ್ಮಿಕ ಸಂಘದ ಅಧ್ಯಕ್ಷ ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪೌರಕಾರ್ಮಿಕ ಸಂಘದ ಉಪಾಧ್ಯಕ್ಷೆ ರಶ್ಮಿ, ಕಚೇರಿ ವ್ಯವಸ್ಥಾಪಕಿ ಸವಿತಾ, ಆರೋಗ್ಯ ನಿರೀಕ್ಷಕ ಉದಯಕುಮಾರ್, ಕಂದಾಯ ನಿರೀಕ್ಷಕ ರಾಮು, ಪುರಸಭೆ ನೌಕರರು, ಪೌರಕಾರ್ಮಿಕರು, ಆರೋಗ್ಯ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಮಹಿಳಾ ದಿನ ಆಚರಿಸುವುದರೊಂದಿಗೆ ಮಹಿಳಾ ಪೌರಕಾರ್ಮಿಕ ಉಡುಗೊರೆ ನೀಡಿ ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆಯ ಅಂಗವಾಗಿ ತಾಲ್ಲೂಕು ಆರೋಗ್ಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಅಂಗಾಂಗ ದಾನಕ್ಕೆ 10 ಮಂದಿ ನೋಂದದಣಿ ಮಾಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.