ಕುಶಾಲನಗರ: ‘ಗ್ರಾಮೀಣ ಪ್ರದೇಶಗಳಲ್ಲಿನ ಕೆರೆಗಳ ಅಭಿವೃದ್ಧಿಯಿಂದ ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗಲಿದ್ದು, ಬದುಕ ಹಸನಾಗಲಿದೆ’ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಗೊಂದಿಬಸವನಹಳ್ಳಿಯ ರೊಂಡೆಕೆರೆಯನ್ನು ₹1.60 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಮಂಗಳವಾರ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

‘ಪ್ರತಿ ವರ್ಷ ಮಳೆಗಾಲದಲ್ಲಿ ರೊಂಡೆಕೆರೆ ತುಂಬಿ ತಡೆಗೋಡೆ ಒಡೆದು ರೈತರ ಜಮೀನು ಹಾಗೂ ವಿವಿಧ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ತೊಂದರೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರೈತರ, ಗ್ರಾಮಸ್ಥರ ಬೇಡಿಕೆಯನ್ನು ಸಣ್ಣ ನೀರಾವರಿ ಸಚಿವರಿಗೆ ತಿಳಿಸಿ ಮನವಿ ಮಾಡಿದ ಮೇರೆಗೆ ಅನುದಾನ ಒದಗಿಸಿದ್ದಾರೆ. ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.

ಕೆರೆಗಳನ್ನು ಅಭಿವೃದ್ಧಿ ಪಡಿಸಿ ರೈತರ ಜಮೀನಿಗೆ ನೀರು ಒದಗಿಸುವುದರ ಜೊತೆಗೆ ಜನ ಜಾನುವಾರು, ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದಾರೆ ಎಂದರು.

ರೊಂಡೆಕೆರೆ ಮಳೆಗಾಲದಲ್ಲಿ ಅತ್ಯಧಿಕ ಮಳೆಯ ನೀರು ಹರಿದ ಸಂದರ್ಭ ಕೆರೆಯ ಏರಿ ಒಡೆದು ನೀರೆಲ್ಲಾ ಪೋಲಾಗಿತ್ತು. ಮೀನು ಸಾಕಣೆಗೂ ಅಡಚಣೆಯಾಗಿತ್ತು. ಹೀಗಾಗಿ ಅನುದಾನ ತಂದು ಕೆರೆಯ ಏರಿ, ತೂಬು ಹಾಗೂ ರಸ್ತೆಯ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದರು.

ಈಗಾಗಲೇ ಒತ್ತುವರಿಯಾಗಿರುವ ಕೆರೆಯ ಜಾಗವನ್ನು ಸರ್ವೆ ಮಾಡಿ ತೆರವುಗೊಳಿಸಬೇಕು. ಈ ಕಾರ್ಯಕ್ಕೆ ಎಲ್ಲರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕುಶಾಲನಗರದ ತಾವರೆಕೆರೆಯನ್ನು ₹3 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಸದ್ಯದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ಪ್ರತಿಮೆಯನ್ನು ಪುರಸಭೆ ಮುಂಭಾಗದಲ್ಲಿ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆಯನ್ನು ಗಣಪತಿ ದೇವಾಲಯ ವೃತ್ತದಲ್ಲಿ ಅಳವಡಿಸುವ ಮೂಲಕ ಗೌರವ ಸಲ್ಲಿಸಲಾಗುತ್ತದೆ ಎಂದರು.

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಮುಖಂಡರಾದ ಕೆ.ಪಿ.ಚಂದ್ರಕಲಾ, ಬಿ.ಜಿ.ಮಂಜುನಾಥ್, ಮಹಿಳಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷೆ ಜಿ.ಆರ್.ಪುಷ್ಪಲತಾ, ಪುರಸಭೆ ನಾಮನಿರ್ದೇಶನ ಸದಸ್ಯರಾದ ಗೊಂದಿಬಸವನಹಳ್ಳಿ ಪ್ರಕಾಶ್, ಜಗದೀಶ್, ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಕುಮಾರ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕುಮಾರಸ್ವಾಮಿ ಇದ್ದರು.

ಕೆರೆಯ ಏರಿ ಒಡೆದು ನೀರು ಪೋಲು ₹3 ಕೋಟಿ ವೆಚ್ಚದಲ್ಲಿ ತಾವರೆಕೆರೆ ಅಭಿವೃದ್ಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.