ಕುಶಾಲನಗರ: ಅಡುಗೆ ಅನಿಲ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ಎಚ್ಚರಿಕೆ ನೀಡಿದರು.

ಮಂಗಳವಾರ ಇಲ್ಲಿನ ಪುರಸಭಾ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಾಣಿಜ್ಯ, ಗೃಹಬಳಕೆ ಸಿಲಿಂಡರ್ಗಳ ಬೇಡಿಕೆ, ವಿತರಣೆ, ಎಲ್ಪಿಜಿ, ಪೆಟ್ರೋಲ್, ಡೀಸೆಲ್ಗಳ ಲಭ್ಯತೆಯ ಮಾಹಿತಿ ಪಡೆದ ಬಳಿಕ ಮೇಲಿನಂತೆ ಎಚ್ಚರಿಕೆ ನೀಡಿದರು.

ಸಭೆಯ ಆರಂಭದಲ್ಲಿಯೇ ವಿವಿಧ ಇಲಾಖೆ ಅಧಿಕಾರಿಗಳು ಸಭೆಯ ದಿವಸ ಅನುಪಾಲ ವರದಿ ನೀಡುತ್ತಿರುವ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸಭೆಗೆ ಕೆಲ ದಿನಗಳ ಮುಂಚಿತವಾಗಿಯೇ ವರದಿ ನೀಡಬೇಕು ಎಂದು ಸೂಚಿಸಿದರು.

ಅರ್ಹರು ಸಂಧ್ಯಾ ಸುರಕ್ಷಾ ಯೋಜನೆಯಿಂದ ವಂಚಿತರಾಗದಂತೆ ಎಚ್ಚರ ವಹಿಸಬೇಕು, ಅರ್ಹರಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಸೂಚಿಸಿದರು.

‘7ನೇ ಹೊಸಕೋಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಜಾಗವನ್ನು ಅಕ್ರಮ ಮಂಜೂರಾತಿ ಮಾಡಿದ್ದಾರೆ, ಅಲ್ಲಿ ಅನುಮತಿಯಿಲ್ಲದೆ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಈ ಹಿಂದೆ ಕೂಡ ಈ ಬಗ್ಗೆ ಚರ್ಚಿಸಲಾಗಿದೆ’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ವಿಷಯ ಪ್ರಸ್ತಾಪಿಸಿ ಶಾಸಕರ ಗಮನ ಸೆಳೆದರು.

ಈ ಬಗ್ಗೆ ಕ್ರಮಕೈಗೊಳ್ಳದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಾರ್ಯವೈಖರಿಯನ್ನು ಶಾಸಕರು ಪ್ರಶ್ನಿಸಿದರು. ಸೂಕ್ತ ಕ್ರಮವಹಿಸಲು ತಾಲ್ಲೂಕು ಪಂಚಾಯತಿ ಇಒ ಮತ್ತು ತಹಶೀಲ್ದಾರ್ ಅವರಿಗೆ ನಿರ್ದೇಶಿಸಿದರು.

‘ಉಳ್ಳವರ ಬಳಿ ಈಗಲೂ ಬಿಪಿಎಲ್ ಕಾರ್ಡ್ಗಳು ಇದ್ದು, ಎಪಿಎಲ್ಗೆ ಪರಿವರ್ತನೆಯಾದ ಬಡ ಕುಟುಂಬಗಳ ದಾಖಲೆ, ಸ್ಥಳ ಪರಿಶೀಲನೆ ಆಹಾರ ಇಲಾಖೆಯಿಂದ ಸಮರ್ಪಕವಾಗಿ ನಡೆದಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಶಾಸಕರು ಆಹಾರ ಇಲಾಖೆ ಉಪ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು. ಫಲಾನುಭವಿಗಳಿಗೆ ನ್ಯಾಯ ಒದಗಿಸುವಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ’ ಎಂದು ಆರೋಪಿಸಿದರು.

‘ಬಡ ಕುಟುಂಬಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. ಈ ಬಗ್ಗೆ ನಿರ್ಲಕ್ಷ್ಯ ತೋರದಂತೆ ತಾಕೀತು ಮಾಡಲಾಯಿತು. ಅಧಿಕಾರಿಗಳು ಮಾನವೀಯತೆ ತೋರಬೇಕು. ಇರುವ ಪರಿಹಾರ ಮಾರ್ಗದ ಬಗ್ಗೆ ಸಂಬಂಧಿಸಿದವರಿಗೆ ಅಗತ್ಯ ಮಾಹಿತಿ ಒದಗಿಸಲು ಸೂಚಿಸಲಾಯಿತು. ತುರ್ತು ವೈದ್ಯಕೀಯ ಸಮಸ್ಯೆ ಇದ್ದಲ್ಲಿ ಕಡ್ಡಾಯವಾಗಿ ಬಿಪಿಎಲ್ ಒದಗಿಸಬೇಕು’ ಎಂದು ಸೂಚಿಸಲಾಯಿತು.

‘ಬಹುತೇಕ ಮಂದಿ ತೋಟದ ಕಾರ್ಮಿಕರು ಹೆಬ್ಬೆರಳು ಚಿಹ್ನೆ ನೀಡಿದಾಗ ಈಗಾಗಲೇ ಆಧಾರ್ ಅಸ್ತಿತ್ವದಲ್ಲಿರುವುದಾಗಿ ತೋರಿಸುತ್ತಿದೆ. ಆದರೆ ಆಧಾರ್ ಸಂಖ್ಯೆ ಡಿಸ್ಪ್ಲೇ ಆಗದೆ ಸಮಸ್ಯೆಯಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಅಬ್ದುಲ್ ನಭಿ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-51-1039363141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.