ಕುಶಾಲನಗರ: ಇಲ್ಲಿನ ಮುಳ್ಳುಸೋಗೆ ಗ್ರಾಮದಲ್ಲಿ ನಿರ್ಮಿಸಿರುವ ಕನ್ನಂಬಾಡಿಯಮ್ಮ ದೇವಾಲಯದ 48 ದಿನಗಳ ಮಂಡಲ ಪೂಜಾಮಹೋತ್ಸವ ಇತ್ತೀಚೆಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ದೇವಾಲಯದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ವಿವಿಧ ಪೂಜಾ ಕಾರ್ಯಗಳು ಜರುಗಿದವು. ಕನ್ನಂಬಾಡಿ ದೇವರ ವಿಗ್ರಹಕ್ಕೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಅರ್ಚಕ ಕೃಷ್ಣಮೂರ್ತಿ ಭಟ್ ಮುಂಜಾನೆಯಿಂದ ದೇವಾಲ ಯದಲ್ಲಿ ಧಾರ್ಮಿಕ ಪೂಜಾ ಕೈಕಾರ್ಯ ನೆರವೇರಿಸಿದರು. ಬಳಿಕ ಮಹಾಮಂಗಳಾರತಿ ನೆರವೇರಿತು.

ಭಕ್ತರಿಗೆ ದೇವಾಲಯ ಸಮಿತಿ ವತಿಯಿಂದ ಅನ್ನದಾನ ನೆರವೇರಿಸಲಾಯಿತು. ದೇವಾಲಯ ನಿರ್ಮಾಣಕ್ಕೆ ಶ್ರಮಿಸಿದ ದೇವಾಲಯ ಸಮಿತಿಯ ಪದಾಧಿಕಾರಿಗಳನ್ನು ಗ್ರಾಮಸ್ಥರು ಹಾಗೂ ಎಂ.ಷಣ್ಮುಖಂ ಹಾಗೂ ಎಂ.ಎಚ್.ಚಂದ್ರಪ್ಪ ಕುಟುಂಬದ ವತಿಯಿಂದ ಸನ್ಮಾನಿಸಿದರು.

ಗ್ರಾಮದ ಹಿರಿಯರಾದ ಎಂ.ಕೆ.ರಾಜು, ದೇವಾಲಯ ಸಮಿತಿ ಅಧ್ಯಕ್ಷ ಎಂ.ಎಚ್.ಅಣ್ಣೇಗೌಡ, ಉಪಾಧ್ಯಕ್ಷ ಎಂ.ಆರ್.ನಂಜುಂಡ, ಕಾರ್ಯದರ್ಶಿ ಆರ್.ಪ್ರವೀಣ್, ಖಜಾಂಚಿ ಎಂ.ವಿ. ದಾಸೇಗೌಡ, ನಿರ್ದೇಶಕರಾದ ಎಂ. ಪಳನಿಸ್ವಾಮಿ, ಎಂ.ಟಿ.ರಘು, ಎಂ.ಆರ್.ಮಹದೇವಪ್ಪ, ಎಂ.ಸಿ.ಸಂತೋಷ್, ಎಂ.ಎಚ್.ಚಂದ್ರಪ್ಪ, ವಿ.ಎ.ದಿನೇಶ್, ಎಂ.ಕೆ.ಚಂದ್ರು, ಎಂ.ಬಿ.ಸುರೇಶ್, ಎಂ.ಎಸ್.ಪ್ರಸನ್ನ, ರಂಗಸ್ವಾಮಿ ಪಾಲ್ಗೊಂಡಿದ್ದರು. ದೀಪಾ ಸ್ವಾಗತಿಸಿ, ದಿವ್ಯಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-1983053216

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.