ಕುಶಾಲನಗರ: ಕಟ್ಟಡದ ಮೇಲೆ ಹಾದುಹೋಗಿರುವ ವಿದ್ಯುತ್ ಲೈನ್ ಪರಿಶೀಲಿಸಿ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಸೂಚನೆ ನೀಡಿದರು.

ಇಲ್ಲಿ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗುಮ್ಮನಕೊಲ್ಲಿ ಬಳಿ ಈಚೆಗೆ ವಿದ್ಯುತ್ ಲೈನ್ ತಗಲಿ ಬಾಲಕಿ ಸುಟ್ಟು ಅಸ್ವಸ್ಥಳಾಗಿರುವ ಬಗ್ಗೆ ಚರ್ಚೆ ನಡೆಯಿತು. ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ನಡೆದಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದು ಮತ್ತು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹೆಬ್ಬಾಲೆ ಗ್ರಾಮದಲ್ಲಿ ಸೆಸ್ಕ್ ಶಾಖಾ ಕಚೇರಿ ತೆರೆಯಲು ಪ್ರಸ್ತಾವ ಸಲ್ಲಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸುಂಟಿಕೊಪ್ಪ ಪಟ್ಟಣದಲ್ಲಿ ಮುಖ್ಯ ರಸ್ತೆಯ ಬದಿಯಲ್ಲಿ ಕಟ್ಟಡದ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸದಸ್ಯ ರಫೀಕ್ ಖಾನ್ ಅಧಿಕಾರಿಗಳ ಗಮನಕ್ಕೆ ತಂದರು.

ಪಡಿತರ ಚೀಟಿ ಮತ್ತು ಅಂಗನವಾಡಿಗಳ ಸಮಸ್ಯೆ, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಮತ್ತು ಪಾವತಿಯಾದ ಅನುದಾನದ ಮಾಹಿತಿ ಬಗ್ಗೆ ಚರ್ಚೆ ನಡೆಯಿತು.

ಕುಶಾಲನಗರ ಕೆ ಎಸ್ ಆರ್ ಟಿ ಸಿ ಘಟಕ ಕಾಮಗಾರಿ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಘಟಕ ಪ್ರಾರಂಭವಾದ ವೇಳೆ ಗ್ರಾಮಾಂತರ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಕಲ್ಪಿಸುವ ಬಗ್ಗೆಯೂ ಚರ್ಚೆ ನಡೆಯಿತು.

ತಾ.ಪಂ ಇಒ ಪರಮೇಶ್ವರಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಸಿ.ಶಶಿಭೀಮಯ್ಯ, ಮುಸ್ತಫ, ತಾಲ್ಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣೇಗೌಡ, ಎಸ್.ಎಸ್. ವಿವೇಕಾನಂದ, ಶ್ರೀನಿವಾಸ್ ಕುಮಾರ್ ಯು.ಎಂ. ಕಿಶೋರ್ ಫಿಲೋಮಿನಾ, ಎಸ್. ಎ. ಶ್ರೀನಿವಾಸ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-839803921

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.