ಕುಶಾಲನಗರ: ಕಾಡಾನೆ ಹಾವಳಿಗಳನ್ನು ನಿಯಂತ್ರಿಸಲು ಅರಣ್ಯ ಖಾತೆ ಸಚಿವ ಈಶ್ವರ ಬಿ ಖಂಡ್ರೆ ವಿಫಲರಾಗಿದ್ದಾರೆ ಎಂದು ದೂರಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಆರೋಪದ ಮೇರೆಗೆ ಸುಮಾರು 50ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಇಲ್ಲಿಗೆ ಸಮೀಪದ ಗುಡ್ಡೆಹೊಸೂರು ಜಂಕ್ಷನ್ನಲ್ಲಿ ವಶಕ್ಕೆ ಪಡೆದರು.

ಸೋಮವಾರಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಹಾಗೂ ಬಿಜೆಪಿ ಮುಖಂಡ ಬಿ.ಬಿ.ಭಾರತೀಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಗುಡ್ಡೆಹೊಸೂರು ಜಂಕ್ಷನ್ನಲ್ಲಿ ಸೇರಿದ್ದರು.

ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷ ತಡೆಗಟ್ಟುವಲ್ಲಿ ವಿಫಲ, ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ, ವನ್ಯಜೀವಿಗಳಿಂದ ಪ್ರಾಣಹಾನಿ ಇನ್ನಿತರರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಈಶ್ಚರ ಖಂಡ್ರೆ ಅವರಿಗೆ ಘೇರಾವ್ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದರು. ಈ ವಿಷಯ ತಿಳಿದ ಪೊಲೀಸರು ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದರು.

ರಸ್ತೆ ಬದಿಯಲ್ಲಿ ನಿಂತು ಸಚಿವರಿಗೆ ಮನವಿ ಪತ್ರ ಸಲ್ಲಿಸಿ ಎಂದು ಪೊಲೀಸರು ಹೇಳಿದ ಮಾತನ್ನು ಕಾರ್ಯಕರ್ತರು ಒಪ್ಪಲಿಲ್ಲ. ಈ ವೇಳೆ ಪೊಲೀಸರಿಗೂ, ಬಿಜೆಪಿ ಕಾರ್ಯಕರ್ತರಿಗೂ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆಗೆ ಮುಂದಾದ ಐವತ್ತಕ್ಕೂ ಹೆಚ್ಚಿನ ಕಾರ್ಯಕರ್ತರನ್ನು ವಶಕ್ಕೆ ಪಡೆದು ಎರಡು ವಾಹನಗಳಲ್ಲಿ ಪೊಲೀಸರು ಕರೆದೋಯ್ದರು. ವಾಹನದ ಒಳಗಿನಿಂದಲೇ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರ, ಅರಣ್ಯ ಸಚಿವರು ಹಾಗೂ ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ, ‘ಜಿಲ್ಲೆಯಲ್ಲಿ ವನಜೀವಿಗಳ ಹಾವಳಿ ಮಿತಿಮೀರಿದೆ. 30ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಗಮನ ಹರಿಸಬೇಕಿದ್ದ ಅರಣ್ಯ ಸಚಿವರು ಎರಡೂವರೆ ವರ್ಷಗಳ ಬಳಿಕ ಜಿಲ್ಲೆಗೆ ಆಗಮಿಸುತ್ತಿರುವುದು ವಿಪರ್ಯಾಸ. ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಲು ಮುಂದಾಗಿದ್ದ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಿರುವ ಮೂಲಕ ಕಾಂಗ್ರೆಸಿಗರು ಸಂವಿಧಾನ ವಿರೋಧಿ ಕಾರ್ಯ ನಡೆಸಿದೆ’ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಕಾರ್ಯದರ್ಶಿ ರಕ್ಷಿತ್ ಮಾವಜಿ, ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಉಪಾಧ್ಯಕ್ಷ ಎಂ.ಡಿ.ಕೃಷ್ಣಪ್ಪ, ಮಹೇಶ್ ತಿಮ್ಮಯ್ಯ, ಮಂಡಲ ಉಪಾಧ್ಯಕ್ಷ ಕೃಷ್ಣಪ್ಪ, ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ ಜೋಯಪ್ಪ, ಒಬಿಸಿ ಮೋರ್ಚಾ ಅಧ್ಯಕ್ಷ ಸುನಿಲ್, ಎಸ್ಟಿ ಮೋರ್ಚಾ ಅಧ್ಯಕ್ಷ ಪ್ರವೀಣ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್, ಮಂಡಲ ವಕ್ತಾರ ಕಂಠಿ ಕಾರ್ಯಪ್ಪ, ಪ್ರವೀಣ್, ಸುಮನ್ ಮತ್ತಿತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-734909838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.