ಕುಶಾಲನಗರ: ರಾಜ್ಯದಲ್ಲಿರುವ ಮುಸ್ಲಿಂ ಸಮುದಾಯದ ಜನಸಂಖ್ಯೆ ಆಧರಿಸಿ ಶೇ 4ರಷ್ಟಿರುವ ಮೀಸಲಾತಿಯನ್ನು ಶೇ 6ಕ್ಕೆ ಏರಿಕೆ ಮಾಡಬೇಕು ಕರ್ನಾಟಕ ಮುಸ್ಲಿಂ ಯೂನಿಟಿ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿತು.

ಕರ್ನಾಟಕ ಮುಸ್ಲಿಂ ಯೂನಿಟಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಗುಡ್ಡೆಹೊಸೂರು ಎಕ್ಸಲೆನ್ಸಿ ರೆಸಾರ್ಟ್ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಮುಸ್ಲಿಂ ಯೂನಿಟಿ ರಾಜ್ಯಾಧ್ಯಕ್ಷ ಜಬ್ಬಾರ್ ಕಲಬುರ್ಗಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಮುಸ್ಲಿಂ ಜಾಗೃತಿ ಸಮಾಲೋಚನಾ ಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಒತ್ತಾಯಿಸಲಾಯಿತು.

‘ಬಿಜೆಪಿ ಸರ್ಕಾರ ‘2ಬಿ’ಗೆ ರದ್ದುಗೊಳಿಸಿರುವ ಶೇ 4 ಮೀಸಲಾತಿ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಶೇ 4ರಷ್ಟನ್ನು ಮೀಸಲಾತಿಯನ್ನು ಪುನಃ ಯಥಾಸ್ಥಿತಿಯಂತೆ ಮುಂದುವರೆಸಬೇಕು. ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅಫಿಡೆವಿಟ್ ಮುಖಾಂತರ ಸಲ್ಲಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಇರುವ ಒಬಿಸಿ ಒಟ್ಟು ಮೀಸಲಾತಿಯಲ್ಲಿ ಎಲ್ಲ ಜಾತಿಗಳಿಗೆ ಪ್ರತ್ಯೇಕ ಒಳಮೀಸಲಾತಿಗಾಗಿ ಕಾನೂನು ತಿದ್ದುಪಡಿ ಮಾಡಬೇಕು’ ಎಂದು ಆಗ್ರಹಿಸಿತು.

‘ಅಲ್ಪಸಂಖ್ಯಾತ ಸಮುದಾಯದ ಆಡಳಿತ ಮಂಡಳಿಗಳು ನಡೆಸುತ್ತಿರುವ ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅನುದಾನಕ್ಕೊಳಪಡಿಸಬೇಕು. ಶಿಕ್ಷಣ ಸಂಸ್ಥೆಗಳಿಗೆ ಕಟ್ಟಡ ಮತ್ತು ಇತರೆ ಮೂಲ ಸೌಕರ್ಯಗಳನ್ನು ಜಾರಿಗೊಳಿಸಬೇಕು. ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ನದಾಫ್, ಪಿಂಚಾರ ಜನಾಂಗದ ಅಭಿವೃದ್ಧಿಗಾಗಿ ನಿಗಮ, ಮಂಡಳಿಯನ್ನು ತ್ವರಿತಗತಿ ಕಾರ್ಯರೂಪಕ್ಕೆ ತರಬೇಕು’ ಎಂಬ ನಿರ್ಣಯವನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲು ತೀರ್ಮಾನಿಸಲಾಯಿತು.

ಕರ್ನಾಟಕ ಮುಸ್ಲಿಂ ಯೂನಿಟಿ ಗೌರವಾಧ್ಯಕ್ಷ ಜಿ.ಎ.ಬಾವಾ, ರಾಜ್ಯ ಉಪಾಧ್ಯಕ್ಷ ನಾಸೀರ್ ಇಂಪಾಲ್, ಮಹಿಳಾ ಘಟಕದ ಅಧ್ಯಕ್ಷೆ ಡಾ.ಫರಹಾನ ನೀಗರಬೇಗಂ, ಬೆಂಗಳೂರು ವಿಭಾಗದ ಅಧ್ಯಕ್ಷ ನಾಸೀರ ಲಕ್ಕಸ್ಟಾರ, ಯುವ ಘಟಕದ ರಾಜ್ಯಾಧ್ಯಕ್ಷ ಎನ್.ಎಂ.ನೂರ ಅಹ್ಮದ್, ಕಿತ್ತೂರು ಕರ್ನಾಟಕ ವಲಯ ಕಾರ್ಯದರ್ಶಿ ಕೆ.ಎಂ.ಸೈಯ್ಯದ್, ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಅಜ್ಜದ್ ಅಹ್ಮದ್, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ, ಜಿಲ್ಲಾ ವಕ್ಫ್ ಮಂಡಳಿ ಕೊಡಗು ಮಾಜಿ ಅಧ್ಯಕ್ಷ ಕೆ.ಎ.ಯಾಕೂಬ್, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷರಾದ ಎ.ಬಿ.ಉಮ್ಮರ್, ಎಂ.ಎಚ್.ಮಹಮ್ಮದ್, ಬಿ.ಎಂ.ಹಮೀದ್,
ಸಿ.ಎಂ.ಹಮ್ಮಿದ್ಮೌಲವಿ, ಹೀಲಾಲ್ ಮಸೀದಿ ಕಾರ್ಯದರ್ಶಿ ಅಬ್ದುಲ್ ಮಜೀದ್ ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ.ಆದಂ, ನಾಪೋಕ್ಲು ಇಸ್ಮಾಯಿಲ್, ಕೊಟ್ಟಮುಡಿ ಹಂಸ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.