ಕುಶಾಲನಗರ: ಸಮೀಪದ ಗೊಂದಿಬಸವನಹಳ್ಳಿ ಗ್ರಾಮದ ಮೈನ್ ಕೋರೆಯಲ್ಲಿರುವ ಶ್ರೀ ಮಾರಿಯಮ್ಮ ದೇವರ ವಾರ್ಷಿಕ ಪೂಜೋತ್ಸವ ಶ್ರದ್ದಾಭಕ್ತಿಯಿಂದ ನಡೆಯಿತು.

ಮೂರು ದಿನಗಳ ಕಾಲ ನಡೆದ ಧಾರ್ಮಿಕ ಪೂಜೋತ್ಸವದಲ್ಲಿ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಮಾರಿಯಮ್ಮನ ಕೃಪೆಗೆ ಪಾತ್ರರಾದರು.

ಗ್ರಾಮದ ಮಹಿಳೆಯರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಅಮ್ಮನವರಿಗೆ ತಂಬಿಟ್ಟು ತಟ್ಟೆಯಲ್ಲಿಟ್ಟು ಮೆರವಣಿಗೆ ಮೂಲಕ ತಂದು ನೈವೇದ್ಯ ಅರ್ಪಿಸಿದರು. ಅರ್ಚಕ ಮುತ್ತುಸ್ವಾಮಿ ಧಾರ್ಮಿಕ ವಿಧಿ ನಡೆಸಿದರು.

ಪೂಜೋತ್ಸವದ ಅಂಗವಾಗಿ ಗ್ರಾಮದ ಬೀದಿಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ದೇವಾಲಯದ ಗರ್ಭ ಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವರ ಮೂರ್ತಿಯನ್ನು ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ದೇವಾಲಯ ಸಮಿತಿ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಗಣೇಶ, ಖಜಾಂಚಿ ಮಣಿ, ಪ್ರಮುಖರಾದ ಸುಧಾಕರ, ಸಂತೋಷ, ಎಂ.ಚಂದ್ರು, ನವೀನ, ರಾಜೇಂದ್ರ, ರವಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-2137534655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.