ಕುಶಾಲನಗರ: ಪಟ್ಟಣದ ವರ್ಕ್ ಶಾಪ್ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನ ಹಾಗೂ ಸಂಘದ 16ನೇ ವಾರ್ಷಿಕೋತ್ಸವ ಶುಕ್ರವಾರ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಟೌನ್ ಪೊಲೀಸ್ ಠಾಣೆ ಸಿಪಿಐ ಬಿ.ಆರ್. ಪ್ರದೀಪ್ ಕಾರ್ಮಿಕ ದಿನದ ಮಹತ್ವದ ಬಗ್ಗೆ ಮಾತನಾಡಿದರು. ‘ಕಾರ್ಮಿಕರು ಕಾನೂನಿನ ಬಗ್ಗೆ ಅರಿವು ಹೊಂದುವುದು ಅತ್ಯಗತ್ಯ. ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ನಡೆಸುವ ಹೋರಾಟಗಳ ಸಂದರ್ಭ ನಿಯಮಗಳ ಉಲ್ಲಂಘನೆ ಆಗದಂತೆ ಎಚ್ಚರವಹಿಸಬೇಕು’ ಎಂದರು.

ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಾರ್ಮಿಕರಿಗಿಂತ ಮಿಗಿಲಾಗಿ ಸಮಾಜದ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ದುಡಿಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ವರ್ಕ್ ಶಾಪ್ ಯೂನಿಯನ್ ಅಧ್ಯಕ್ಷ ಎಂ.ಆರ್.ಪೂವಯ್ಯ ಅಧ್ಯಕ್ಷತೆ ವಹಿಸಿದ್ದರು. ಮೊದಲಿಗೆ ಕಾರ್ಮಿಕ ದಿನಾಚರಣೆ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಳಿಕ ಗಣಪತಿ ದೇವಾಲಯದ ಬಳಿ ಸಾಮೂಹಿಕವಾಗಿ ಪಟಾಕಿ ಸಿಡಿಸಿ ನಗರದಲ್ಲಿ ಮೆರವಣಿಗೆ ನಡೆಸಿದರು.

ಟೌನ್ ಪೊಲೀಸ್ ಠಾಣಾಧಿಕಾರಿ ಎಚ್.ಟಿ.ಶಿವಣ್ಣ, ಸಂಚಾರ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್ ವರ್ಕ್ ಶಾಪ್ ಯೂನಿಯನ್ ಪದಾಧಿಕಾರಿಗಳಾದ ಸಿ.ಎನ್.ಮದನ್, ಶಿವಕುಮಾರ, ರಂಜಿತ್, ಸಮೀರ್, ವಿನ್ಸೆಂಟ್, ಎನ್.ಸಿ. ಗಣೇಶ್, ಸತೀಶ್, ರವಿ, ಮನು, ಗಣೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-51-445516355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.