ಕುಶಾಲನಗರ: ತಾಲ್ಲೂಕಿನ ಮುಳ್ಳುಸೋಗೆ ಗ್ರಾಮ ದೇವತೆ ದೊಡ್ಡಮ್ಮ ದೇವಿಯ ವಾರ್ಷಿಕ ಪೂಜೋತ್ಸವ ಗುರುವಾರ ಶ್ರದ್ಧಾಭಕ್ತಿಯಿಂದ ನಡೆಯಿತು.

ವಾರ್ಷಿಕೋತ್ಸವ ಅಂಗವಾಗಿ ದೇವಿಯ ವಿಗ್ರಹಕ್ಕೆ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ದೇವಾಲಯ ಹಾಗೂ ಪ್ರಮುಖ ಬೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಶೃಂಗಾರ ಮಾಡಲಾಗಿತ್ತು. ದೇವಾಲಯದ ಆವರಣದಲ್ಲಿ ಹೋಮ ಹವನಗಳು ನಡೆದವು. ಕಣಿವೆ ರಾಮಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಆಚಾರ್ ಮತ್ತು ಮಹಾಬಲ ಅವರ ನೇತೃತ್ವದಲ್ಲಿ ಪೂಜಾ ವಿಧಿಗಳು ನೆರವೇರಿದವು. ಮಧ್ಯಾಹ್ನ ಮಹಾಮಂಗಳಾರತಿಯೊಂದಿಗೆ ನೆರೆದ ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.

ದೇವಾಲಯ ಸಮಿತಿಯ ಅಧ್ಯಕ್ಷ ಎಂ.ಎ.ಕುಮಾರಸ್ವಾಮಿ, ಉಪಾಧ್ಯಕ್ಷ ಎಂ.ಕೆ.ಧನರಾಜು, ಕಾರ್ಯದರ್ಶಿ ಎಂ.ಎಚ್.ಅಣ್ಣೇಗೌಡ, ಸಹಕಾರ್ಯದರ್ಶಿ ಎಂ. ಮಂಜುನಾಥ್, ಖಜಾಂಚಿ ಎಂ.ಆರ್.ಸೋಮಶೇಖರ್, ಸದಸ್ಯರಾದ ಎಂ.ಆರ್.ನಂಜುಂಡ, ಎಂ.ಸಿ.ಮಂಜುನಾಥ್, ಗೋವಿಂದರಾಜ್, ವಿಶ್ವನಾಥ್, ಅಪ್ಪಣ್ಣ, ಸಂತೋಷ್, ತಮ್ಮಯ್ಯ, ಜಯರಾಜ್, ಗಣಪತಿ, ವಿಶ್ವನಾಥ್, ಸೋಮ ಇದ್ದರು. ಸಮಿತಿ ವತಿಯಿಂದ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-975027077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.