ಕುಶಾಲನಗರ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಸಂಶಯದ ಮೇಲೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಬಸವನಹಳ್ಳಿಯ ನಿವಾಸಿ ತೀರ್ಥ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ಕೊಟ್ಟಾಯಂ ಮೂಲದ ಮುರಳಿ (48) ಕೊಲೆಯಾದ ವ್ಯಕ್ತಿ. ಈತ ಶುಂಠಿ ಕೃಷಿ ಮಾಡಲು ಗುತ್ತಿಗೆಗೆ ಪಡೆದಿದ್ದವರ ಬಳಿ ಕೆಲಸ ಮಾಡಿಕೊಂಡಿದ್ದರು. ಇವರ ಮನೆಯ ಸಮೀಪ ಇದ್ದ ತೀರ್ಥ ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಬಳಿಕ ತನ್ನ ಪತ್ನಿಯ ಮೇಲೂ ರಾಡ್ನಿಂದ ಹಲ್ಲೆ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಚಾರವನ್ನು ಆರೋಪಿ ತೀರ್ಥ ಮಣಿಕಂಠ ಎಂಬುವವರಿಗೆ ತಿಳಿಸಿದ್ದ. ಅವರು ಮನೆಯ ಬಳಿ ಬಂದು ಪರಿಶೀಲಿಸಿ ದೂರು ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿ ಹುಡುಕಾಟ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತೆರಳಿ ಪರಿಶೀಲನೆ ನಡೆಸಿದ್ದರು.

ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.