ಕುಶಾಲನಗರ: ಇಲ್ಲಿನ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿ ಆರ್.ಸಿ ಬಡಾವಣೆಯಲ್ಲಿ ಅಲ್ಪಸಂಖ್ಯಾತರ ಇಲಾಖೆಯಿಂದ ನಿರ್ಮಿಸಲು ಉದ್ದೇಶಿಸಿರುವ ಮೌಲನಾ ಆಜಾದ್ ಶಾಲಾ ಕಟ್ಟಡ ಕಾಮಗಾರಿಗೆ ಬಡಾವಣೆಗಳ ನಿವಾಸಿಗಳು ವಿರೋಧ ವ್ಯಕ್ತಪಡಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ಬಡಾವಣೆ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಕಣಿವೆ ನಾಗೇಂದ್ರ ನೇತೃತ್ವದಲ್ಲಿ ಸೇರಿದ ಬಡಾವಣೆಯ ನಿವಾಸಿಗಳು, ಜನವಸತಿ ಪ್ರದೇಶದಲ್ಲಿ ಮೂಲ ಸೌಕರ್ಯ ಒದಗಿಸಲು ಸಾಧ್ಯವಿಲ್ಲದಂತ ಜಾಗದಲ್ಲಿ ಶಾಲೆ ನಿರ್ಮಾಣಕ್ಕೆ ಮುಂದಾಗಿರುವ ಕ್ರಮ ಖಂಡಿಸಿದರು.

ಈ ಹಿಂದೆ ಬಡಾವಣೆಯ ನಿವಾಸಿಗಳು ಶ್ರಮದಾನ ಮಾಡುವ ಮೂಲಕ ಹಾಗೂ ಮನೆ ಮನೆಗಳಲ್ಲಿ ಹಣ ಸಂಗ್ರಹಿಸಿ ಸಮತಟ್ಟು ಮಾಡಿ ಸ್ವಚ್ಛವಾಗಿಟ್ಟುಕೊಂಡಿರುವ ಉದ್ಯಾನ ಜಾಗದ 45 ಸೆಂಟು ಜಾಗದಲ್ಲಿ ಶಾಲೆ ತೆರೆಯ ಹೊರಟಿರುವುದು ಅವೈಜ್ಞಾನಿಕ ಎಂದು ದೂರಿದರು.

ಸರ್ಕಾರದಿಂದ ನಿರ್ಮಾಣವಾಗುವ ಹೊಸ ಶಾಲಾ ಪರಿಸರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಅಟದ ಮೈದಾನ, ವಾಹನಗಳ ಪಾರ್ಕಿಂಗ್, ವಿಶಾಲವಾದ ರಸ್ತೆ ಹೀಗೆ ಮೂಲ ಸೌಕರ್ಯಗಳು ಇರಬೇಕು. ಆದರೆ ಕೊಡಗು ಅಲ್ಪಸಂಖ್ಯಾತ ಇಲಾಖೆ ಕಿರಿದಾದ ಜಾಗದಲ್ಲಿ ಶಾಲೆ ತೆರೆಯಲು ಯೋಜಿಸಿರುವುದು ಸಮಂಜಸವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಡಾವಣೆಯ ನಿವಾಸಿಗಳು ಒಂದೆಡೆ ಸೇರಿ ಸಭೆ ನಡೆಸಿ ಇಲಾಖೆಯ ಕ್ರಮ ಖಂಡಿಸಿ ಸಂಸದರು, ಶಾಸಕರು ಹಾಗೂ ತಾಲ್ಲೂಕು ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗಿದೆ. ದೇಶದ ಗಡಿಗಳಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿ ನಿವೃತ್ತಿಯಾಗಿ ಬಂದಿರುವ ಅನೇಕ ಮಾಜಿ ಸೈನಿಕರು ಮನೆ ನಿರ್ಮಿಸಿ ನೆಮ್ಮದಿಯ ಜೀವನ ಮಾಡುತ್ತಿದ್ದಾರೆ. ಜೊತೆಗೆ ಬಡಾವಣೆಯಲ್ಲಿ ವಯೋವೃದ್ಧರು, ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರೆಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಉದ್ದೇಶಿತ ಶಾಲೆಯ ಕಟ್ಟಡ ಕಾಮಗಾರಿಯನ್ನು ಕೂಡಲೇ ಬೇರೆ ಜಾಗದಲ್ಲಿ ಆರಂಭಿಸಲಿ ಎಂದು ಬಡಾವಣೆ ನಿವಾಸಿಗಳು ಒತ್ತಾಯಿಸಿದರು.

ಇಲಾಖೆ ಅಧಿಕಾರಿಗಳು ಸ್ಪಂದಿಸದಿದ್ದಲ್ಲಿ ಒಗ್ಗಟ್ಟಿನಿಂದ ಹೋರಾಟಕ್ಕೂ ಮುಂದಾಗುವುದಾಗಿ ಕಣಿವೆ ನಾಗೇಂದ್ರ ಎಚ್ಚರಿಸಿದರು.

ಬಡಾವಣೆ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷೆ ರಾಣಿ, ಕಾರ್ಯದರ್ಶಿ ಕಮಲ್, ಖಜಾಂಚಿ ನಾಗರಾಜು, ಮುಖಂಡರಾದ ವಕೀಲ ಜಗದೀಶ್, ಇಂಜಿನಿಯರ್ ಸಂದೀಪ್, ಚೈತ್ರ, ಪುಷ್ಪ, ಮಂಜು, ನಾಗಮಣಿ, ಸುರೇಖಾ, ಶ್ಯಾಮಲಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.