ಕುಶಾಲನಗರ: ಪಟ್ಟಣದ ನಿವಾಸಿ ಕಾರ್ಡ್ ಸಂಸ್ಥೆಯ ಮುಖ್ಯಸ್ಥ ಸಮಾಜ ಸೇವಕ ರಾಯ್ ಡೇವಿಡ್ ಅವರ ಅಂತ್ಯಸಂಸ್ಕಾರ ಸೋಮವಾರ ಟೋಲ್ ಗೇಟ್ ಬಳಿಯ ಕ್ರೈಸ್ತ ಸನ್ಮಾನದಲ್ಲಿ ನಡೆಯಿತು.

ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಆದಿವಾಸಿಗಳು ಭಾಗಿಯಾಗಿ ತಮ್ಮ ಮಾರ್ಗದರ್ಶಕನಿಗೆ ಅಂತಿಮ ನಮನ ಸಲ್ಲಿಸಿದರು. ಕೊಡಗು ಮತ್ತು ಮೈಸೂರು ಜಿಲ್ಲೆಯಿಂದ ಆಗಮಿಸಿದ ಆದಿವಾಸಿಗಳು, ಗಿರಿಜನ ಮುಖಂಡರು ಮೃತರ ಅಂತಿಮ ದರ್ಶನ ಪಡೆದು, ಮೆರವಣಿಗೆಯಲ್ಲಿ ಪಾಲ್ಗೊಂಡರು.

ಕಳೆದ 4 ದಶಕಗಳ ಕಾಲ ಆದಿವಾಸಿಗಳ ಮಾರ್ಗದರ್ಶಕರಾಗಿ, ಹೋರಾಟಗಳನ್ನು ನಡೆಸಿದ ಡೇವಿಡ್ ಅವರ ಅಗಲಿಕೆಯಿಂದ ಆದಿವಾಸಿ ಸಮುದಾಯಕ್ಕೆ ಅಪಾರ ನಷ್ಟವುಂಟಾಗಿದೆ ಎಂದು ಜೇನು ಕುರುಬರ ಅಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ಜೆ.ಟಿ.ರಾಜಪ್ಪ ತಿಳಿಸಿದರು.

ಮೈಸೂರು, ಕೊಡಗು ಜಿಲ್ಲೆಯಲ್ಲಿ ಆದಿವಾಸಿಗಳನ್ನು ಸಂಘಟಿಸಿ ತಿಳಿವಳಿಕೆ ನೀಡಿ ಸರಕಾರದ ಸೌಲಭ್ಯಗಳು, ಹಕ್ಕುಗಳನ್ನು ಪಡೆದುಕೊಳ್ಳಲು ಮಾರ್ಗದರ್ಶನ ಮಾಡಿದ ಮಹಾನ್ ಚೇತನ ರಾಯ್ ಡೇವಿಡ್ ಅವರ ಸಾವು ನಮ್ಮೆಲ್ಲರನ್ನು ಕಂಗೆಡಿಸಿದೆ. ಅಷ್ಟರ ಮಟ್ಟಿಗೆ ಅವರು ಪ್ರಭಾವ ಬೀರಿದ್ದರು ಎಂದು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಆರ್.ಕೆ.ಚಂದ್ರು ತಿಳಿಸಿದರು.

ಜೇನು ಕುರುಬರ ಅಭಿವೃದ್ಧಿ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಬಸವಣ್ಣ, ಬುಡಕಟ್ಟು ಕೃಷಿಕರ ಸಂಘದ ಜೆ.ಕೆ.ತಿಮ್ಮ, ಜೆ.ಎಂ.ಸೋಮಯ್ಯ, ಜಯಪ್ಪ ಜೆ.ಟಿ.ಕಾಳಿಂಗ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-51-124841326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.