ಕುಶಾಲನಗರ: ಕೇಂದ್ರ ಸರ್ಕಾರ ಕೈಗೊಂಡಿರುವ ವಕ್ಫ್ ಬೋರ್ಡ್ ಮಸೂದೆ ತಿದ್ದುಪಡಿ ಹಾಗೂ ರಾಜ್ಯ ಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಶಾಲನಗರ ನಗರ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಎಸ್ಡಿಪಿಐ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಅಮೀನ್ ಮುಹಿಸ್ಸಿನ್ ಮಾತನಾಡಿ, ‘ರಾಜ್ಯ ಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಟುವಾಗಿ ವಿರೋಧಿಸುತ್ತೇವೆ. ಈ ಮಸೂದೆ ಪಕ್ಷಪಾತದಿಂದ ಕೂಡಿದ್ದು, ಅಸಾಂವಿಧಾನಿಕ ಮತ್ತು ಮುಸ್ಲಿಂ ವಿರೋಧಿಯಾಗಿದೆ. ಮುಸ್ಲಿಂ ಸಮುದಾಯದ ಸಂಘಟನೆಗಳ, ಜನ ಪ್ರತಿನಿಧಿಗಳ ಅಭಿಪ್ರಾಯವನ್ನು ಪರಿಗಣಿಸದೇ, ಜನರ ಹಿತಾಸಕ್ತಿಗೆ ಕೇಂದ್ರ ಸರ್ಕಾರ ಧಕ್ಕೆ ತರುತ್ತಿದೆ. ಎಸ್.ಡಿ.ಪಿ.ಐ ಈ ಮಸೂದೆಯನ್ನು ತಿರಸ್ಕರಿಸಲು ಭಾರತಿಯ ಜನತೆಗೆ ಕರೆ ನೀಡುತ್ತದೆ’ ಎಂದು ಹೇಳಿದರು.

ಎಸ್.ಡಿ.ಪಿ.ಐ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿ ಕೊಪ್ಪ,ಮಾಜಿ ಜಿಲ್ಲಾಧ್ಯಕ್ಷರು ಅಬ್ದುಲ್ಲಾ ಅಡ್ಕಾರ್
ಮಡಿಕೇರಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಾದ ಬಾಷಾ, ನಗರಾಧ್ಯಕ್ಷರಾದ ಝಕರಿಯಾ ಜಿಲ್ಲಾ ಸಮಿತಿ ಸದಸ್ಯರಾದ ಅಕ್ಮಲ್, ಸ್ವಾಲಿಹ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.