ಕುಶಾಲನಗರ: ಜಿಲ್ಲೆಯಲ್ಲಿ ಹಾಗೂ ಪ್ರವಾಸಿ ಕೇಂದ್ರವಾದ ಕುಶಾಲನಗರ ಪಟ್ಟಣದಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಮಾಡುವುದು ಅಗತ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಜಿ.ಚಿದ್ವಿಲಾಸ್ ಹೇಳಿದರು.

ಇಲ್ಲಿನ ಮಹಾಲಕ್ಷ್ಮಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಬೆಳ್ಳಿಹಬ್ಬ ಸ್ಮರಣ ಸಂಚಿಕೆ ಬೆಳ್ಳಿಪಯಣ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಮಾಡಲಾಗಿದೆ. ಅದೇ ರೀತಿ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲೂ ಪ್ಲಾಸ್ಟಿಕ್ ಬಾಟಲಿಗಳ ನಿಷೇಧ ಕಾರ್ಯರೂಪಕ್ಕೆ ತರಲು ಶ್ರಮಿಸಬೇಕು. ಮನುಷ್ಯನಿಗೆ ವಯಸ್ಸಾದಂತೆ ಮಾಗುತ್ತಾ ಹೋಗುತ್ತಾನೆ. ಆದರೆ ಸಂಘಟನೆಗಳು ಹಳೆಯದಾದಷ್ಟು ಗಟ್ಟಿಗೊಳ್ಳುತ್ತವೆ. ಪತ್ರಕರ್ತ ಸಂಘಟನೆಗಳು ಹೆಚ್ಚು ಶಕ್ತಿಯುತವಾಗಬೇಕು. ಸದಸ್ಯತ್ವ ಕೊಡುವಾಗ ನೈಜ ಪತ್ರಕರ್ತರಿಗೆ ಮಾತ್ರ ಅವಕಾಶ ಕೊಡಬೇಕು ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಅನುಗುಣವಾಗಿ ಪತ್ರಕರ್ತರು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಮಾಧ್ಯಮದವರು ಆಧುನಿಕ ತಂತ್ರಜ್ಞಾನ ರೂಢಿಸಿಕೊಳ್ಳಬೇಕು. ಮಾಧ್ಯಮಗಳು ಸಮಾಜದ ಪ್ರತಿಬಿಂಬ ಆಗಿರುವುದರಿಂದ ತಪ್ಪುಗಳಿದ್ದರೆ ಪ್ರಶ್ನೆ ಮಾಡಬೇಕು. ಪ್ರಚಾರ ಬಯಸುವವರ ಬೆನ್ನು ಹತ್ತುವ ಬದಲು ಸಮಾಜಕ್ಕೆ ಉಪಯೋಗ ಆಗುವ ವರದಿ ಮಾಡಬೇಕು. ವರದಿ ಮಾಡಿದ ವಿಷಯಗಳನ್ನು ವರದಿಗಾರ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅವರು ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಪತ್ರಿಕೋದ್ಯಮದ ಬದುಕು ಕಬ್ಬಿಣದ ಕಡಲೆ ಇದ್ದಂತೆ. ಈಗಿನ ಪತ್ರಕರ್ತರಲ್ಲಿ ವರದಿಗಾರಿಕೆಯ ಆಸಕ್ತಿ ಕಡಿಮೆ ಆಗುತ್ತಿದೆ. ಸುದ್ದಿ ಮಾಡಿದ ನಂತರ ಫಾಲೋ ಅಪ್ ಇರಬೇಕು ಎಂದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಜಿಲ್ಲಾ ಸಂಘದ ಖಜಾಂಚಿ ಆನಂದ್ ಕೊಡಗು, ಪತ್ರಕರ್ತರ ರಾಷ್ಟ್ರೀಯ ಮಂಡಳಿ ಸದಸ್ಯ ಸುನಿಲ್ ಪೊನ್ನೇಟಿ ಪಾಲ್ಗೊಂಡಿದ್ದರು.

ಖಜಾಂಚಿ ಕುಡೆಕಲ್ಲು ಗಣೇಶ್ ಪ್ರಾರ್ಥಿಸಿದರು. ಕಾರ್ಯದರ್ಶಿ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಸಂಘದ ನಿರ್ದೇಶಕರಾದ ಟಿ.ಆರ್. ಪ್ರಭುದೇವ್ ಕಾರ್ಯಕ್ರಮ ನಿರೂಪಿಸಿ, ರಘು ಹೆಬ್ಬಾಲೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.