ಕುಶಾಲನಗರ: ‘ಕಾರ್ಮಿಕರ ಕಲ್ಯಾಣಕ್ಕೆ ಸಾಮಾಜಿಕ ಭದ್ರತೆ ನಾಗರಿಕ ಹಕ್ಕು ಒದಗಿಸಬೇಕು. ಇದರ ಪ್ರಯೋಜನವು ಅಸಂಘಟಿತ ಕಾರ್ಮಿಕರಿಗೆ ಲಭ್ಯವಿಲ್ಲದಿರುವುದು ವಿಷಾದಕರ’ ಎಂದು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘಟನೆಯ ಸ್ಥಾಪಕ ಅಧ್ಯಕ್ಷ ಕುಪೇಂದ್ರ ಅಯನೂರು ಹೇಳಿದರು.

ಇಲ್ಲಿ ನಡೆದ ಕೊಡಗು ಹಾಗೂ ಮೈಸೂರು ವಿಭಾಗದ ಅಸಂಘಟಿತ ಕಾರ್ಮಿಕರ ಸಂಘಟನೆ ಸಭೆಯಲ್ಲಿ ಅವರು ಮಾತನಾಡಿದರು. ಅಸಂಘಟಿತ ಕಾರ್ಮಿಕರಲ್ಲಿ ಕಾನೂನು ಸೌಲಭ್ಯಗಳ ಅರಿವಿನ ಕೊರತೆ, ಅನಕ್ಷರತೆ ಮತ್ತು ಅಸಂಘಟನೆ ಸರ್ಕಾರದ ವಿವಿಧ ಯೋಜನೆಗಳಿಂದ ವಂಚಿತರಾಗಲು ಕಾರಣ ಎಂದು ಹೇಳಿದರು.

ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಸಂಘಟನೆ ನಿರಂತರ ಹೋರಾಟ ನಡೆಸುತ್ತಿದೆ. ಸದಸ್ಯತ್ವವನ್ನು ಪಡೆದು ಸಂಘಟನೆಯನ್ನು ಬಲಿಷ್ಠಗೊಳಿಸಬೇಕು ಎಂದು ಮನವಿ ಮಾಡಿದರು.

ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಕುಶಾಲನಗರ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಕೃಷ್ಣ(ಕಿಟ್ಟಿ) ಹಾಗೂ ಪಿರಿಯಾಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಅವರನ್ನು ಆಯ್ಕೆ ಮಾಡಲಾಯಿತು. ರಾಜ್ಯ ಘಟಕದ ಉಪಾಧ್ಯಕ್ಷ ಮಹೇಶ್ ಪೇಟ್ಕರ್, ಪ್ರಧಾನ ಕಾರ್ಯದರ್ಶಿ ಇಂದೂ ಬಸವನಗೌಡ, ಕಾರ್ಯದರ್ಶಿ ಮಮತಾ ರೆಡ್ಡಿ, ಮೈಸೂರು ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಪಿ. ಮಹಾದೇವ, ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷ ರೆಹಮಾತ್, ಸಂಘಟನಾ ಕಾರ್ಯದರ್ಶಿ ಪದ್ಮವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಗಿರೀಶ್,ಕಲಾವಿದ ಈ.ರಾಜು ಉಪಸ್ಥಿತರಿದ್ದರು.

‘ಅಸಂಘಟಿತ ಕಾರ್ಮಿಕರಲ್ಲಿ ಕಾನೂನು, ಸೌಲಭ್ಯ ಅರಿವಿನ ಕೊರತೆ’ ‘ಅನಕ್ಷರತೆ, ಅಸಂಘಟನೆ ಸರ್ಕಾರದ ಯೋಜನೆ ಕೈತಪ್ಪುತ್ತದೆ’ ‘ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹೋರಾಟ’

‘ಹೋರಾಟ ನಿರಂತರ ’ ಸಂಘಟನೆಯ ರಾಜ್ಯ ಸಮಿತಿ ಅಧ್ಯಕ್ಷ ಪ್ರದೀಪ್ ಹೊನ್ನಪ್ಪ ಮಾತನಾಡಿ ರಾಜ್ಯದ 20 ಜಿಲ್ಲೆಗಳಲ್ಲಿ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. 2014ರಲ್ಲಿ ಸರ್ಕಾರ 11 ವಲಯಗಳ ಕೆಲಸಗಾರರನ್ನು ಅಸಂಘಟಿತ ಕಾರ್ಮಿಕರು ಎಂದು ಗುರುತಿಸಿ ಕಾರ್ಮಿಕರ ಕಾರ್ಡ್ ವಿತರಣೆ ಮಾಡಿದೆ. ಆದರೆ ಬಹುತೇಕರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದರು. ಕೆಲಸ ಮಾಡಲು ಸುರಕ್ಷಿತ ವಾತಾವರಣ ಬೇಕು. ಜೊತೆಗೆ ಸರ್ಕಾರದ ಯೋಜನೆಗಳು ಅರ್ಹ ಕಾರ್ಮಿಕರಿಗೆ ಸಿಗಬೇಕು. ಸಂಘಟನೆ ನಿರಂತರ ಹೋರಾಟ ನಡೆಸುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.