ಕುಶಾಲನಗರ: ಕ್ರೀಡೆಯು ಪರಸ್ಪರ ಸ್ನೇಹವನ್ನು ಬೆಸೆಯುತ್ತದೆ. ಜೊತೆಗೆ ಸರ್ಕಾರಿ ನೌಕರರು ದೈಹಿಕವಾಗಿ ಸದೃಢವಾಗಲು ಇಂತಹ ಕ್ರೀಡಾಕೂಟ ತುಂಬಾ ಅಗತ್ಯ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಇಲ್ಲಿನ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಈಚೆಗೆ ಏರ್ಪಡಿಸಿದ್ದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ಸರ್ಕಾರಿ ನೌಕರರ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಂಡು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿ. ತಮ್ಮ ಪ್ರತಿನಿತ್ಯದ ಜಂಜಾಟ, ಒತ್ತಡದಿಂದ ಮುಕ್ತವಾಗಿ ಎರಡು ದಿನಗಳು ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಉತ್ತಮ ಬೆಳವಣಿಗೆ ಎಂದರು.

ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ತಹಶೀಲ್ದಾರ್ ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ಸೋಮವಾರಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಉದ್ಯಮಿಗಳಾದ ಇರ್ಫಾನ್, ಜಾವಿದ್, ತಾಲ್ಲೂಕು ಪಂಚಾಯತಿ ಇಒ ಪರಮೇಶ್, ಬಿಇಒ ಕೃಷ್ಣಪ್ಪ, ಕ್ರೀಡಾಕೂಟ ಆಯೋಜಕ ಸೈಜನ್ ಕೆ. ಪೀಟರ್, ವಕೀಲ ಶಿವಮೂರ್ತಿ, ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್. ರತ್ನಕುಮಾರ, ಹರೀಶ್, ಸ್ವಾಮಿ ಸೇರಿ ವಿವಿಧ ಇಲಾಖಾ ಮುಖ್ಯಸ್ಥರು ಹಾಗೂ ನೌಕರ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-425343844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.