ಕುಶಾಲನಗರ: ಕಾರ್ಮಿಕರು ಸಂಘಟಿತ ರಾಗುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು.

ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿನ ಕರ್ನಾಟಕ ಪಾನೀಯ ನಿಗಮದ ಲೋಡರ್ಸ್ ಹಾಗೂ ಅನ್ ಲೋಡರ್ಸ್ ಸಂಘದ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಮಿಕರಲ್ಲಿ ಪರಸ್ಪರ ಸೌಹಾರ್ದ, ಒಗ್ಗಟ್ಟು ನೆಲೆಗೊಳ್ಳುವ ಮೂಲಕ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಲಗೊಳ್ಳಬೇಕಿದೆ. ಕಾರ್ಮಿಕರ ಇಲಾಖೆ ವತಿಯಿಂದ ಕಾರ್ಮಿಕ ಕುಟುಂಬದವರಿಗೆ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುವುದಾಗಿ ಶಶಿಧರ್ ಹೇಳಿದರು.

ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಕಾರ್ಮಿಕರು ವ್ಯಸನಗಳಿಂದ ಮುಕ್ತರಾಗುವ ಮೂಲಕ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕಾರ್ಮಿಕರ ಸಂಘದ ಅಧ್ಯಕ್ಷ ಪಾಂಡುರಂಗ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಪರಮೇಶ್, ಖಜಾಂಚಿ ನಂದೀಶ್, ನಿರ್ದೇಶಕರಾದ ಅನಿಲ್, ಚಂದ್ರ, ಸಂತೋಷ್, ಶಶಿಕುಮಾರ್, ವಿ. ಸಂತೋಷ್, ಚಂದ್ರು, ಕೆ.ಡಿ.ಮಹದೇವ, ಕೊಣಸೂರು ಮಹದೇವ, ಗೋವಿಂದರಾಜ, ನಿತ್ಯಾನಂದ, ಪ್ರದೀಪ್,ಸುನಿಲ್, ಸತೀಶ್, ಚೇತನ, ಗಿರಿಯಪ್ಪ, ಅಭಿ, ರಾಮ್, ಜಾನ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-2066346018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.