ಕುಶಾಲನಗರ: ‘ಶಿವಶರಣರು ತಮ್ಮ ವಚನಗಳ ಮೂಲಕ ಹಚ್ಚಿರುವ ಮಾನವತೆಯ ದೀಪ ಎಂದಿಗೂ ಆರದ ದೀಪ. ಅವು ಬದುಕಿಗೆ ದಾರಿದೀಪ’ ಎಂದು ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಪ್ರಾಧ್ಯಾಪಕ ಮೆ.ನಾ.ವೆಂಕಟನಾಯಕ್ ಹೇಳಿದರು.

ಕೊಡಗು ಜಿಲ್ಲಾ ವೀರಶೈವ ಮಹಾಸಭಾ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ತೊರೆನೂರು ವಿರಕ್ತ ಮಠದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾಸಿಕ ಹುಣ್ಣಿಮೆಯ ಚಿಂತನಾಗೋಷ್ಠಿಯಲ್ಲಿ ವಚನಕಾರರ ಕುರಿತು ವಿಶೇಷ ಉಪನ್ಯಾಸ ನೀಡಿದರು.

‘ಅರಿವೇ ನುಡಿ ಜ್ಯೋತಿರ್ಲಿಂಗ, ನಾವಾಡುವ ಮಾತುಗಳು ಮುತ್ತಿನ ಹಾರದಂತಿರಬೇಕು, ಇವನಾರವ ಎನ್ನದೇ ನಮ್ಮವ ಎಂದು ಅಪ್ಪುವ ಮೂಲಕ ವಿಶ್ವಮಾನವರಾಗಬೇಕು, ಹೀಗೆ ಇತರರಿಗೆ ಯಾವುದೇ ಕೆಡುಕು ಬಯಸದೆ ಸರ್ವ ಹಿತ ಬಯಸುವ ಶರಣರ ಚಿಂತನೆಗಳು ಸರ್ವಕಾಲಕ್ಕೂ ಮಾನವೀಯ ಬದುಕಿಗೆ ದಿವ್ಯ ಔಷಧಿ’ ಎಂದರು.

ಮಠದ ಮಲ್ಲೇಶ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ‘ಇಂದಿನ ಯುವ ಜನಾಂಗ ಸಂಸ್ಕಾರ ಹೀನರಾಗುತ್ತಿರುವುದು ಬೇಸರದ ಸಂಗತಿ. ಶರಣರ ಚಿಂತನೆಗಳ ಬೀಜಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ಶಾಲಾ ಕಾಲೇಜುಗಳಲ್ಲಿ ಬಿತ್ತಿದರೆ ಮಾತ್ರ ಉತ್ತಮ ಸಂಸ್ಕಾರ ಮೈಗೂಡಲು ಸಾಧ್ಯ’ ಎಂದರು.

ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ವಿ.ಶಿವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಮಠ, ಮಂದಿರಗಳು, ದೇವಾಲಯಗಳಿಗೆ ಹೆಚ್ಚಾಗಿ ಭೇಟಿ ನೀಡುವ ಮೂಲಕ ಉತ್ತಮ ಚಿಂತನೆ, ಸದಾಚಾರಗಳಿಂದ ಜೀವನ ರೂಪಿಸಿಕೊಳ್ಳಬಹುದು’ ಎಂದರು.

ವೀರಶೈವ ಮಹಾಸಭಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ವೀರಶೈವ ಸರ್ಕಾರಿ ನೌಕರರ ಸಂಘದ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ನಂದೀಶ್, ಕಾರ್ಯದರ್ಶಿ ಶಿವಲಿಂಗು, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಗಣೇಶ, ತೊರೆನೂರು ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಜಗದೀಶ್, ಮರೂರು ಪ್ರಗತಿ ಪರ ಕೃಷಿಕ ಎಚ್.ಎಸ್.ನಾಗರಾಜು, ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕಾರ್ಯದರ್ಶಿ ಬಿ.ನಟರಾಜು, ವೀರಶೈವ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಗಣೇಶ್, ಕೃಷಿಕ ಮಣಜೂರು ಗುರುಲಿಂಗಪ್ಪ, ತೊರೆನೂರು ಸಹಕಾರ ಸಂಘದ ನಿವೃತ್ತ ಸಿಇಒ ಚಂದ್ರಶೇಖರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-51-10895466

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.