ಕುಶಾಲನಗರ: ಪಟ್ಟಣದ ಆರ್ಯ ವೈಶ್ಯ ಮಂಡಳಿ ಮತ್ತು ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ವತಿಯಿಂದ ವಾಸವಿ ಜಯಂತಿ ಕಾರ್ಯಕ್ರಮದ ಅಂಗವಾಗಿ ಅದ್ದೂರಿ ಮೆರವಣಿಗೆ ನಡೆಸಲಾಯಿತು.

ಬೆಳಿಗ್ಗೆ ವಾಸವಿ ಸುಪ್ರಭಾತದೊಂದಿಗೆ ವಾಸವಿ ಜಯಂತಿಯ ಪೂಜಾ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯ ಕಾವೇರಿ ನದಿಯಿಂದ ಮಹಿಳೆಯರು ಪೂರ್ಣಕುಂಭ ಕಳಸ ಹೊತ್ತು ಮೆರವಣಿಗೆ ನಡೆಸಿದರು. ಬಳಿಕ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಮಹಾ ಸಂಕಲ್ಪ, ಅಭಿಷೇಕ, ಮಹಾ ಮಂಗಳಾರತಿ, ಕಳಸ ಸ್ಥಾಪನೆ, ವಾಸವಿ ಹೋಮ, ಪೂರ್ಣಾಹುತಿ ನೆರವೇರಿಸಲಾಯಿತು. ಸಂಜೆ ಕೇರಳದ ಪ್ರಸಿದ್ಧ ಚಂಡೆವಾದ್ಯದೊಂದಿಗೆ ಬೆಳ್ಳಿರಥದಲ್ಲಿ ವಾಸವಿ ಅಮ್ಮನ ಮೂರ್ತಿಯ ಮೆರವಣಿಗೆ ನಡೆಯಿತು.

ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕರ್ನಾಟಕ ಆರ್ಯವೈಶ್ಯ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಕಾರ್ಯದರ್ಶಿ ಕೆ ಪ್ರವೀಣ್, ಉಪಾಧ್ಯಕ್ಷ ಬಿ.ಎಲ್. ಅಶೋಕ್, ಖಜಾಂಜಿ ಪಿ. ಎಸ್. ಪ್ರಶಾಂತ್, ನಿರ್ದೇಶಕರಾದ ವಿ ವೈಶಾಖ್, ಕೆ.ಜೆ.ಸತೀಶ್, ಎ.ಎಸ್. ಕುಮಾರ್, ಮಹಿಳಾ ಮಂಡಳಿ ಅಧ್ಯಕ್ಷೆ ವಾಣಿ ಮಹೇಶ್, ವಾಸವಿ ಯುವಜನ ಸಂಘದ ಅಧ್ಯಕ್ಷ ವಿ.ಜೆ. ಬಾಲಾಜಿ, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಅನುಷಾ ಅರ್ಜುನ್, ವಾಸವಿ ಬಾಲಕಿಯರ ಸಂಘದ ಅಧ್ಯಕ್ಷೆ ಸಾನ್ವಿ ಕೆ.ಪಿ, ವಾಸವಿ ಬಾಲಕರ ಸಂಘದ ಅಧ್ಯಕ್ಷ ಶಿಶಿರ್ ಪಿ.ಡಿ ಹಾಗೂ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-51-985285995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.