ಕುಶಾಲನಗರ: ‘ವಾಸವಿ ಟ್ರಸ್ಟ್, ಆರ್ಯವೈಶ್ಯ ಮಂಡಳಿಯಿಂದ ಆಯೋಜಿಸಲಾದ ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮವು ಸಮುದಾಯದ ಧಾರ್ಮಿಕ ಶ್ರದ್ಧೆ ಮತ್ತು ಏಕತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಹೇಳಿದರು.

ಪಟ್ಟಣದ ರಥಬೀದಿಯಲ್ಲಿರುವ ವಾಸವಿ ಕನ್ನಿಕಾಪರಮೇಶ್ವರಿ ಟ್ರಸ್ಟ್, ಆರ್ಯವೈಶ್ಯ ಮಂಡಳಿಯಿಂದ ಭಾನುವಾರ ನಡೆದ ಶ್ರೀವಾಸವಿ ಕನ್ನಿಕಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಸಮಾಜದ ಮುಖಂಡರಿಗೆ ಸರ್ಕಾರದ ವಿವಿಧ ಹಂತಗಳಲ್ಲಿಆದ್ಯತೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ವಾಸವಿ ಟ್ರಸ್ಟ್ ಆರ್ಯವೈಶ್ಯ ಮಂಡಳಿಯಿಂದ ಆಯೋಜಿಸಲಾದ ಬ್ರಹ್ಮಕಲಶೋತ್ಸವ ಸಮಾರಂಭವು ಆರ್ಯವೈಶ್ಯ ಪೀಠಾಧಿಪತಿ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಸಮ್ಮುಖದಲ್ಲಿ ಜರುಗುತ್ತಿರುವುದು ಸಮುದಾಯದ ಧಾರ್ಮಿಕ ಶ್ರದ್ಧೆ ಮತ್ತು ಏಕತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

ದಕ್ಷಿಣ ಭಾರತವು ಹಿಂದೂ ದೇವಾಲಯಗಳ ಸಂಗಮವಾಗಿದ್ದು, ಬೆಂಗಳೂರಿನ ಮಲ್ಲೇಶ್ವರದಲ್ಲಿ ಸ್ಥಾಪಿತವಾದ ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ದೇವಸ್ಥಾನವು ಮೊದಲ ದೇವಸ್ಥಾನವಾಗಿದೆ ಎಂದು ಸ್ಮರಿಸಿದರು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕಗಳಲ್ಲಿ ಆರ್ಯವೈಶ್ಯ ಸಮಾಜವು ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ಟ್ರಸ್ಟ್ಗಳ ಮೂಲಕ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡುತ್ತಿದೆ ಎಂದರು.

ಬೆಂಗಳೂರಿನ ಆರ್ಯವೈಶ್ಯ ಪೀಠಾಧಿಪತಿ, ಶ್ರೀವಾಸವಿ ಪೀಠದ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಟ್ರಸ್ಟ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಆರ್ಯವೈಶ್ಯ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಆರ್ಯವೈಶ್ಯ ಮಂಡಳಿಯ ಕಾರ್ಯದರ್ಶಿ ಕೆ.ಪ್ರವೀಣ್, ಮಂಡಳಿಯ ಪದಾಧಿಕಾರಿಗಳು , ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಿ.ಅಮೃತ್ ರಾಜ್, ಮಹಿಳಾ ಮಂಡಳಿ ಅಧ್ಯಕ್ಷೆ ವಾಣಿ ಮಹೇಶ್, ವಾಸವಿ ಯುವಜನ ಸಂಘದ ಉಪಾಧ್ಯಕ್ಷ ವೈಶಾಖ್, ವಿ.ಜೆ. ಬಾಲಾಜಿ, ಕಾರ್ಯದರ್ಶಿ ಅಂಜನ್ ಬಿ.ಎನ್., ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಅನುಷಾ ಅರ್ಜುನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.