ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ವಿವಿ: ಬಿಸಿಎ ಅರ್ಜಿ ಆಹ್ವಾನ

Published 2 ಮೇ 2024, 15:25 IST
Last Updated 2 ಮೇ 2024, 15:25 IST
ಅಕ್ಷರ ಗಾತ್ರ

ಕುಶಾಲನಗರ: ಚಿಕ್ಕ ಅಳುವಾರದಲ್ಲಿರುವ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ನೂತನ ಶೈಕ್ಷಣಿಕ ವರ್ಷಕ್ಕೆ  ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (ಬಿಸಿಎ) ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಕೆ ಮೇ 3 ರಿಂದ ಆರಂಭವಾಗುತ್ತಿದ್ದು, ಮೇ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಫೋನ್‌ ಮೊ: 8861774778 ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ kuk.karnataka.gov.in ಅನ್ನು ಸಂದರ್ಶಿಸಬಹುದು.

ವೃತ್ತಿಪರ ಕೋರ್ಸ್‌ಗಳಾದ ಬಿಸಿಎ, ಎಂಸಿಎ ಮತ್ತು ಎಂಬಿಎ ಪದವಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.  ಇವುಗಳಿಗೆ ಮುಂದಿನ ಹಂತದಲ್ಲಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಮೂರು ವರ್ಷಗಳ ಪದವಿ ಕೋರ್ಸ್ , ಆರು ಸೆಮಿಸ್ಟರ್‌ ಹೊಂದಿದೆ. ಡೇಟಾಬೇಸ್ ನಿರ್ವಹಣಾ ವ್ಯವಸ್ಥೆಗಳು, ನೆಟ್‌ವರ್ಕಿಂಗ್, ಡೇಟಾ ರಚನೆ ಮತ್ತು ಪೈಥಾನ್, ಸಿ,ಸಿ++,ಕ್ಲೌಡ್ ಕಂಪ್ಯೂಟಿಂಗ್ ಮತ್ತು ‘ಜಾವಾ’ ನಂತಹ ಕೋರ್ ಪ್ರೋಗ್ರಾಮಿಂಗ್ ಹಾಗೂ ಮಾಹಿತಿ ತಂತ್ರಜ್ಞಾನ ಪರಿಕರಗಳ ವಿನ್ಯಾಸ ಮತ್ತು ಅಭಿವೃದ್ಧಿಯಲ್ಲಿ ಪ್ರಾವಿಣ್ಯ ಹೊಂದಲು ಈ ಕೋರ್ಸ್ ಅನುಕೂಲವಾಗಲಿದೆ. ಅರ್ಜಿ ಸಲ್ಲಿಸಬಹುದು ಎಂದು ಕುಲಸಚಿವ ಡಾ.ಸೀನಪ್ಪ  ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT