ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೋದನಾ ಕೊಠಡಿ, ಕಂಪ್ಯೂಟರ್ ಲ್ಯಾಬ್‌ಗೆ ಚಾಲನೆ

ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆಯ ಕೊಡುಗೆ
Last Updated 7 ಡಿಸೆಂಬರ್ 2019, 13:52 IST
ಅಕ್ಷರ ಗಾತ್ರ

ಮಡಿಕೇರಿ: ‘ಉತ್ತಮ ಸಮಾಜ ನಿರ್ಮಿಸುವಲ್ಲಿ ಸಂಘ–ಸಂಸ್ಥೆಗಳ ಪಾತ್ರವೂ ಮುಖ್ಯ. ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆಯು ಉತ್ತಮ ಕಟ್ಟಡ ಕಟ್ಟಿಸಿಕೊಟ್ಟು ಬಡ ವಿದ್ಯಾರ್ಥಿಗಳಿಗೆ ನೆರವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಬೆಂಗಳೂರು ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆ ಸ್ಥಾಪಿಸಿರುವ ಭೋದನಾ ಕೊಠಡಿ ಹಾಗೂ ಕಂಪ್ಯೂಟರ್ ಲ್ಯಾಬ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ತುಂಬಾ ಹಾನಿ ಉಂಟಾಗಿದ್ದು ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆಯಲು ಸಂಸ್ಥೆ ನೆರವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳು ಎದುರಾದಂತಹ ಸಂದರ್ಭದಲ್ಲಿ ವಿವಿಧ ಸಂಘ–ಸಂಸ್ಥೆಗಳು ಜಿಲ್ಲೆಗೆ ಉದಾರ ನೆರವು ನೀಡಿದನ್ನು ಸ್ಮರಿಸಿದರು.

ಅತಿವೃಷ್ಟಿ ಹಾನಿಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಸಂಬಂಧಿಸಿದ ಪರಿಹಾರಗಳ ಕುರಿತು ಯೋಜನೆ ರೂಪಿಸಿದ್ದು ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು, ಸಂಘ– ಸಂಸ್ಥೆಗಳ ಸಹಯೋಗದೊಂದಿಗೆ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮಾರುತಿ ಮಾತನಾಡಿ, 2018ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಇಲ್ಲಿನ ಜನರು ಸಂಕಷ್ಟಕ್ಕೆ ತುತ್ತಾದರು. ಆದ್ದರಿಂದ, ಜಿಲ್ಲೆಗೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಪದವಿ ಪೂರ್ವ ಕಾಲೇಜಿಗೆ ₹ 52 ಲಕ್ಷ ವೆಚ್ಚದಲ್ಲಿ ನೂತನ ಎರಡು ತರಗತಿ ಕೊಠಡಿ, ಪ್ರಯೋಗಾಲಯ, ಹೈಟೆಕ್ ಶೌಚಾಲಯ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಬೋಧ ಸ್ವರೂಪನಂದಜಿ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣ ಪಡೆದು ಸಮಾಜಕ್ಕೆ ತಮ್ಮದೇ ಉತ್ತಮ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ನರಸಿಂಹ ಮೂರ್ತಿ ಮಾತನಾಡಿ, ಕೊಡಗು ಸೈನ್ಯಕ್ಕೆ, ಶಿಸ್ತಿಗೆ ಹೆಸರುವಾಸಿ ವಿದ್ಯಾರ್ಥಿಗಳು ಉತ್ತಮ ಶಿಸ್ತನ್ನು ರೂಡಿಸಿಕೊಂಡು ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.

ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಸ್ಥಾಪಕರಾದ ಆಚಾರ್ಯ ಅವರ ಪುತ್ರ ಎ.ಪಿ.ಆಚಾರ್ಯ ಅವರು ಸಂಸ್ಥೆಯ ಬೆಳವಣಿಗೆ ಹಾಗೂ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಬೆಂಗಳೂರಿನ ನೆಹರು ಕೋ–ಆಪರೇಟಿವ್ ಸೊಸೈಟಿ ವತಿಯಿಂದ ನೂತನ ಕಟ್ಟಡಕ್ಕೆ ಅಗತ್ಯವಿರುವ ಪೀಠೋಪಕರಣಗಳನ್ನು ನೀಡಿದರು. ಸಮಾರಂಭದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ದತ್ತಿ ನಿಧಿಯಿಂದ ನಗದು ಬಹುಮಾನ ನೀಡಲಾಯಿತು.

ಸಂಸ್ಥೆಯ ಉಪಾಧ್ಯಕ್ಷರಾದ ವಿಷ್ಣುಭರತ್, ಎ.ಪಿ.ಆಚಾರ್ಯ, ಖಜಾಂಚಿಗಳಾದ ಕೆ.ಎಲ್.ರಮೇಶ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ನರಸಿಂಹಮೂರ್ತಿ, ಎ.ಮುರುಳೀಧರ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ದೇವಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ದನಂಜಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT