ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು | ಪ್ರಯೋಗಾಲಯದ ಸಿಬ್ಬಂದಿಗೂ ಸೋಂಕು: 76ಕ್ಕೇರಿದ ಕೋವಿಡ್‌ ಪ್ರಕರಣ

ಎರಡು ದಿನ ಲ್ಯಾಬ್‌ ಬಂದ್‌
Last Updated 3 ಜುಲೈ 2020, 10:40 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕೋವಿಡ್ 19 ಪರೀಕ್ಷೆಯ ಪ್ರಯೋಗಾಲಯದ ಇಬ್ಬರು ಸಿಬ್ಬಂದಿಗೂ ಸೋಂಕು ತಗುಲಿದೆ.

ಈ ಹಿಂದೆ ಕೋವಿಡ್ ಸೋಂಕು ದೃಢಪಟ್ಟ ನಾಲ್ವರು ವೈದ್ಯರ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಇಬ್ಬರು ಆರೋಗ್ಯ ಕಾರ್ಯಕರ್ತರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಅಧೀನದ ಪ್ರಯೋಗಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.ಪ್ರಯೋಗಾಲಯಕ್ಕೆ ಸೋಂಕು ನಿವಾರಕ ಸಿಂಪಡಿಸುವ ಉದ್ದೇಶದಿಂದ ಪ್ರಯೋಗಾಲಯ ಬಂದ್‌ ಮಾಡಲಾಗಿದೆ. ಜುಲೈ 5ರಿಂದ ಪ್ರಯೋಗಾಲಯ ಮತ್ತೆ ಕಾರ್ಯಾರಂಭ ಮಾಡಲಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಮತ್ತೆ ನಾಲ್ಕು ಹೊಸ ಪ್ರಕರಣಗಳು

ಮಡಿಕೇರಿಯ ಆಸ್ಪತ್ರೆಯ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಮೂರ್ನಾಡು ಗ್ರಾಮದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 49 ವರ್ಷದ ಪುರುಷ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ದೃಢವಾಗಿದೆ.

ನಗರದ ಮಹದೇವಪೇಟೆಯ ಚೌಡೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿ ವಾಸವಿದ್ದ 27 ವರ್ಷದ ಆರೋಗ್ಯಕರ್ತರೊಬ್ಬರಿಗೆ ಸೋಂಕು ದೃಢವಾಗಿದೆ. ಭಗವತಿ ನಗರದ 24 ವರ್ಷದ ಆರೋಗ್ಯಕರ್ತರೊಬ್ಬರಿಗೆ ಸೋಂಕು ದೃಢವಾಗಿದೆ.

ವಿರಾಜಪೇಟೆ ಶಾಂತಿನಗರದ 40 ವರ್ಷದ ಪುರುಷರೊಬ್ಬರು ಜ್ವರ ಲಕ್ಷಣದಿಂದ ಬಳಲುತ್ತಿದ್ದು, ಅವರಿಗೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ. ಕೋವಿಡ್-19 ಸೋಂಕಿತರ ಸಂಖ್ಯೆ 76ಕ್ಕೇರಿದೆ. 73 ಪ್ರಕರಣಗಳು ಸಕ್ರಿಯವಾಗಿವೆ. ನಿಯಂತ್ರಿತ ಪ್ರದೇಶಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

ಹೋಂ ಸ್ಟೇ ಸಿಬ್ಬಂದಿಗೆ ತಪಾಸಣೆ

ಜಿಲ್ಲೆಯ ಎಲ್ಲ ಹೋಂ ಸ್ಟೇ, ರೆಸಾರ್ಟ್, ಹೋಟೆಲ್, ಲಾಡ್ಜ್ ಸೇರಿದಂತೆ ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿರುವ ಎಲ್ಲರ ಗಂಟಲು ದ್ರವದ ಮಾದರಿ ಪರೀಕ್ಷೆ ನಡೆಸಲಾಗುತ್ತಿದೆ. ಆದ್ದರಿಂದ, ಕೊಡಗಿನಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಎಲ್ಲ ಪ್ರವಾಸೋದ್ಯಮಿಗಳು, ಸಿಬ್ಬಂದಿಗಳು ಹಾಗೂ ಪ್ರವಾಸಿಗರು ಕೂಡ ಗಂಟಲು ಹಾಗೂ ಮೂಗು ದ್ರವ ಪರೀಕ್ಷೆಗೆ ಒಳಗಾಗುವಂತೆ ನೋಡಲ್ ಅಧಿಕಾರಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT