ಬುಧವಾರ, ಆಗಸ್ಟ್ 17, 2022
23 °C

₹ 2.5 ಲಕ್ಷ ಮೌಲ್ಯದ ಬೀಟೆ ನಾಟಾ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಶಾಲನಗರ: ಸಮೀಪದ ವಾಲ್ನೂರು ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ $ 2.5 ಲಕ್ಷ ಮೌಲ್ಯದ ಬೀಟೆ ಮರದ ನಾಟಾಗಳನ್ನು ಮಂಗಳವಾರ ಅರಣ್ಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಗೆ ಬರುವ ಕಾಫಿ ತೋಟದಲ್ಲಿ ಅಕ್ರಮ ಬೃಹತ್ ಬೀಟೆ ಮರ ಕಡಿದು ನಾಟಾಗಳಾಗಿ ಮಾಡಿ ಸಂಗ್ರಹಿಸಿಡಲಾಗಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಉಪ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಹಾಗೂ ಸೋಮವಾರಪೇಟೆ ವಿಭಾಗದ ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರೂ ಮಾರ್ಗದರ್ಶನದಲ್ಲಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ಮತ್ತು ಮೀನುಕೊಲ್ಲಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ ಹಾಗೂ ಸಿಬ್ಬಂದಿ  ದಾಳಿ ಮಾಡಿ ಬೀಟೆ ಮರದ 15 ನಾಟಾಗಳನ್ನು ವಶಪಡಿಸಿಕೊಂಡರು.

ಕಾಫಿ ತೋಟದಲ್ಲಿ ಬೀಟೆ ಮರ ಕಡಿದು ಕಡಿದು ಸಂಗ್ರಹ ಮಾಡಿರುವ ವ್ಯಕ್ತಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.‌

ಕಾರ್ಯಾಚರಣೆಯಲ್ಲಿ ಅರಣ್ಯ ರಕ್ಷಕ ರವಿ ಅಟ್ನಾಳ, ಆರ್.ಆರ್.ಟಿ. ಸಿಬ್ಬಂದಿಗಳಾದ ಅಪ್ಪಸ್ವಾಮಿ, ದುರ್ಗೇಶ್, ತಿಲಕ್, ಅಶಿಕ್, ಜಗದೀಶ್, ಚಾಲಕ ವಾಸು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು