ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಕೆ.ಟಿ.ಪೆಮ್ಮಯ್ಯ, ಉಪಾಧ್ಯಕ್ಷೆ ಪಿ.ಎಂ.ಕಮಲ, ಜಂಟಿ ಕಾರ್ಯದರ್ಶಿ ಮಹೇಶ್, ಜಂಟಿ ಖಜಾಂಚಿ ಪಿ.ಕೆ.ಗಣಪತಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಕುರಿತು ಮಾತನಾಡಿದ ಕಂದಾಯ ಸಚಿವರು, ಕಡತವನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಕ್ರಮಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ ಎಂದು ಶಾಸಕರ ಕಚೇರಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.