ಸೋಮವಾರ, ಸೆಪ್ಟೆಂಬರ್ 26, 2022
24 °C

ಕೊಡಗು: ಜಿಲ್ಲೆಯಾದ್ಯಂತ ತಗ್ಗಿದ ಮಳೆ ಅಬ್ಬರ, ನಿಲ್ಲದ ಭೂಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ಭೂಕುಸಿತಗಳು ಗುರುವಾರವೂ ಮುಂದುವರಿದಿವೆ.

ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಊರುಗುತ್ತಿಯಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ತೋಟದಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಭಾರಿ ಪ್ರಮಾಣದಲ್ಲಿ ನೀರು ನೆಲದಿಂದ ಉಕ್ಕಿ ಹರಿಯುತ್ತಿದ್ದು, ಆತಂಕ ಮೂಡಿಸಿದೆ. ಇದರಿಂದ ಕಾಫಿ ಗಿಡಗಳೂ ಸೇರಿದಂತೆ ಮಣ್ಣು, ಕಲ್ಲುಗಳು ಕೊಚ್ಚಿಕೊಂಡು ಹೋಗಿವೆ.

ಮಂಚಳ್ಳಿ–ಕುಟ್ಟ ರಸ್ತೆಯಲ್ಲೂ ಭೂಮಿ ಕುಸಿದಿದೆ. ಬಿರುನಾಣಿ– ಹುದಿಕೇರಿ ರಸ್ತೆಯಲ್ಲೂ ಮಣ್ಣು ಕುಸಿಯುತ್ತಿದೆ. ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ರಾಜು ಎಂಬುವವರಿಗೆ ಸೇರಿದ ಹಸು ಶೀತಗಾಳಿಯಿಂದ ಮೃತಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು