ಸೋಮವಾರಪೇಟೆ: ತಾಲ್ಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯದಲ್ಲಿ ಗ್ರಾಮೀಣ ಮಕ್ಕಳಿಗೆ ‘ಓದು ಬೆಳಕು’ ಕಾರ್ಯಕ್ರಮದಡಿ ಏರ್ಪಡಿಸಿರುವ 15 ದಿನಗಳ ಬೇಸಿಗೆ ಶಿಬಿರಕ್ಕೆ ಗುರುವಾರ ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಕುಮಾರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡಬಾರದು. ಉನ್ನತ ವ್ಯಾಸಂಗ ಮಾಡುವಾಗ ಮೊಬೈಲ್ ಫೋನ್ ಬಳಸಿದರೆ ಅಭ್ಯಂತರವಿಲ್ಲ. ಈಗ ಮೊಬೈಲ್ ಹುಚ್ಚು ಬೆಳೆಸಿಕೊಂಡರೆ ಅದೊಂದು ಕೆಟ್ಟ ಚಟವಾಗಿ ನಿಮ್ಮನ್ನು ಆವರಿಸಿಕೊಳ್ಳುತ್ತದೆ. ಪೋಷಕರು ಮಕ್ಕಳಿಗೆ ತಿಳಿಹೇಳಿಬೇಕು’ ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖಂಡರಾದ ಪುಷ್ಪ ಮಾತನಾಡಿ, ‘ನಿರಂತರ ಕಲಿಕೆಯಿಂದ ಮಾತ್ರ ಉತ್ತಮ ಅಂಕ ಪಡೆಯಬಹುದು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿ ಹೆಚ್ಚಿನ ಪುಸ್ತಕ ಓದಿ ಜ್ಞಾನ ಸಂಪಾದಿಸಿಕೊಳ್ಳಬೇಕು. ಪಂಚಾಯಿತಿ ಕಚೇರಿಗಳಲ್ಲಿ ಗ್ರಂಥಾಲಯಕ್ಕೆ ಭೇಟಿ ನೀಡಿ, ಓದುವ ಹವ್ಯಾಸ ಬೆಳಸಿಕೊಳ್ಳಬೇಕು’ ಎಂದು ಕಿವಿ ಮಾತು ಹೇಳಿದರು.

ವೇದಿಕೆಯಲ್ಲಿ ಪಂಚಾಯಿತಿ ಸದಸ್ಯ ಪ್ರಕಾಶ್, ಗ್ರಂಥಾಲಯ ಮೇಲ್ವಿಚಾರಕಿ ಪದ್ಮಾವತಿ ಇದ್ದರು. 6ರಿಂದ 16 ವರ್ಷದೊಳಗಿನ ಮಕ್ಕಳು ಶಿಬಿರದಲ್ಲಿ ಭಾಗವಹಿಸಿ ವಿವಿಧ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.