ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Published : 5 ಸೆಪ್ಟೆಂಬರ್ 2024, 15:47 IST
Last Updated : 5 ಸೆಪ್ಟೆಂಬರ್ 2024, 15:47 IST
ಫಾಲೋ ಮಾಡಿ
Comments

ಮಡಿಕೇರಿ: ಗ್ರಾಮಮಟ್ಟದಲ್ಲಿ ಜನರ ಆರೋಗ್ಯವನ್ನು ಉತ್ತಮಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅತ್ಯಂತ ಉಪಯೋಗಕಾರಿಯಾಗಿದೆ ಎಂದು ಕೊಡಗು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಜಿ.ಧನರಾಜು ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಗ್ರಾಮ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಜನರಿಗೆ ಆರೋಗ್ಯದ ಕುರಿತು ಜ್ಞಾನ ಮತ್ತು ಅರಿವನ್ನು ಮೂಡಿಸುವುದು ಗ್ರಾಮ ಆರೋಗ್ಯ ಕಾರ್ಯಕ್ರಮದ ಪ್ರಮುಖ ಉದ್ದೇಶ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಈ ಮಹತ್ತರ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಕೊಳ್ಳಲಾಗಿದ್ದು 2 ದಿನಗಳ ಕಾಲ ತರಬೇತಿ ನಡೆಯಲಿದೆ ಎಂದರು.

ಈ ತರಬೇತಿ ಕಾರ್ಯಕ್ರಮದಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಮುಟ್ಟಿನ ನೈರ್ಮಲ್ಯ, ಕ್ಷಯ, ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

ಈ ಕಾರ್ಯಕ್ರಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆಯುತ್ತಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಸಿಡಿಪಿಒ ಮತ್ತು ವಲಯ ಆರೋಗ್ಯ ಮತ್ತು ಶಿಕ್ಷಣಾಧಿಕಾರಿಗಳಿಗೆ ತರಬೇತಿ ಕೊಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‍ಕುಮಾರ್ ಮಾತನಾಡಿ, ‘ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಈ ವಿಷಯಗಳ ಕುರಿತು ಕನಿಷ್ಠ 3-4 ಗಂಟೆಗಳ ಕಾಲ ಈ ಕಾಯಿಲೆಗಳ ಕುರಿತು ವಿಶೇಷ ಸಭೆಯಲ್ಲಿ ಹಂಚಿಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ತರಬೇತಿಯನ್ನು ಪಡೆದ ಅಧಿಕಾರಿಗಳು ಗ್ರಾಮಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡುತ್ತಾರೆ ಎಂದು ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೆಶಕ ನಟರಾಜ್, ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂಧನ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರಾದ ಡಾ.ಡೆವಿನ್ ಭಾಗಿಯಾಗಿದ್ದರು. ಈ ವೇಳೆ ಗ್ರಾಮ ಆರೋಗ್ಯ ಕಾರ್ಯಕ್ರಮದ ರಾಜ್ಯ ಸಂಯೋಜನಾಧಿಕಾರಿ ಡಾ.ಶಶಿಕುಮಾರ್ ಡಿ.ಜೆ, ಕೆ.ಎಚ್.ಪಿ.ಟಿ.ಯ ಶಶಿಧರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT