ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಅರಿವು ಕಾರ್ಯಕ್ರಮ ಇಂದು

Published 11 ಡಿಸೆಂಬರ್ 2023, 20:40 IST
Last Updated 11 ಡಿಸೆಂಬರ್ 2023, 20:40 IST
ಅಕ್ಷರ ಗಾತ್ರ

ಮಡಿಕೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು ವತಿಯಿಂದ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವು ಡಿ. 12ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮ್ ಪ್ರಸಾದ್, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ಜೆ.ಜವರಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಚಾಲಕಿ ಎಚ್.ಪಿ.ನಿರ್ಮಲಾ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಕಾನೂನು ನೆರವು ಅಭಿರಕ್ಷಕ ಕೆ.ಆರ್.ವಿದ್ಯಾಧರಗೌಡ ಅವರು ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT