ಗೋಣಿಕೊಪ್ಪಲು: ಜಾಗತಿಕ ಸಂದರ್ಭದಲ್ಲಿ ಶಿಕ್ಷಣ ಕಲಿಯುವ ಪ್ರತಿಯೊಬ್ಬ ಮಗುವಿಗೂ ಇಂಗ್ಲಿಷ್ ಕಲಿಯುವುದು ಅನಿವಾರ್ಯವಾಗಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಪೊನ್ನಂಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಪುಟಾಣಿ ಮಕ್ಕಳಿಗೆ ಅಂಗನವಾಡಿಗಳಲ್ಲೇ ಇಂಗ್ಲಿಷ್ ಕಲಿಸುವುದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಕನ್ನಡದೊಂದಿಗೆ ಇಂಗ್ಲಿಷ್ ಭಾಷೆಯನ್ನು ಮಕ್ಕಳಿಗೆ ಹೇಳಿಕೊಡುವ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಅಂಗನವಾಡಿಯಲ್ಲಿ ಇರುವ ಶಿಕ್ಷಕಿಯರು ಹಾಗೂ ಸಹಾಯಕಿಯರು ಮಕ್ಕಳಲ್ಲಿ ಇಂಗ್ಲಿಷ್ ಕಲಿಕೆಯ ಆಸಕ್ತಿಯನ್ನು ಮೂಡುವಂತೆ ಮಾಡಬೇಕೆಂದು ಸೂಚಿಸಿದರು.

ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಆಲೀರ ರಶೀದ್, ಮುಖ್ಯಾಧಿಕಾರಿ ಗೋಪಿ, ಸದಸ್ಯರಾದ ಕೋಳೆರ ಭಾರತಿ, ಸುನಿತಾ, ರಫೀಕ, ಜೂನೈದ್, ರಾಮಕೃಷ್ಣ, ಹಿರಿಯರಾದ ಮೂಕಲೆರ ಕುಶಾಲಪ್ಪ, ಪಕ್ಷದ ಪ್ರಮುಖರಾದ ಬಾಬು, ಅಪ್ಪಚ್ಚಂಗಡ ಮೋಟಯ್ಯ, ಕಡೆಮಾಡ ಕುಸುಮ, ಧನ್ಯ, ಪಲ್ವಿನ್ ಪೂಣಚ್ಚ, ಉದಯ್, ಹರೀಶ್, ಪ್ರೀತಮ್, ಮಂಜು ದೇವಯ್ಯ, ತಹಶೀಲ್ದಾರ್ ಮೋಹನ್ ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಅಪ್ಪಣ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.