ಚಿರತೆ ಚರ್ಮ ಮಾರಾಟಕ್ಕೆ ಯತ್ನ: ಬಂಧನ

ವಿರಾಜಪೇಟೆ: ಸಮೀಪದ ಐಮಂಗಲ ಗ್ರಾಮದ ಬಳಿ ಬುಧವಾರ ಸಂಜೆ ಚಿರತೆ ಚರ್ಮವನ್ನು ಅಕ್ರಮವಾಗಿ ಮಾರಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿ, ಚಿರತೆ ಚರ್ಮವನ್ನು ವಶಕ್ಕೆ ಪಡೆದಿದ್ದಾರೆ.
ಗ್ರಾಮದ ಬಳಿ ದ್ವಿಚಕ್ರ ವಾಹನ ತಡೆದು ತಪಾಸಣೆ ನಡೆಸಿದಾಗ ಎರಡು ಚಿರತೆಯ ಚರ್ಮಗಳು ಪತ್ತೆಯಾಗಿವೆ.
‘ಸುಂಟಿಕೊಪ್ಪದ ಮಹಮ್ಮದ್ ಕಬೀರ್ ಎಂಬಾತನನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ರಷೀದ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳಿಂದ ದ್ವಿಚಕ್ರ ವಾಹನ ಹಾಗೂ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮಾಹಿತಿ ನೀಡಿದರು.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪರಾರಿ ಆಗಿರುವ ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಅಧೀಕ್ಷಕ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕಿ ವೀಣಾ ನಾಯಕ್, ಸಿಬ್ಬಂದಿಗಳಾದ ಕೆ.ಬಿ.ಸೋಮಣ್ಣ, ಟಿ.ಪಿ. ಮಂಜುನಾಥ್, ಪಿ.ಬಿ. ಮೊಣ್ಣಪ್ಪ, ಎಸ್.ಎಂ. ಯೋಗೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.