ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂಟಿಕೊಪ್ಪ | ವಿದ್ಯಾರ್ಥಿಗಳ ಮನೆಗಳಲ್ಲಿ ಪಾಠ- ಪ್ರವಚನ

ಪ್ರೌಢಶಾಲೆಯ ಶಿಕ್ಷಕರ ಕಾಳಜಿ
Last Updated 21 ಮೇ 2020, 19:30 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ರಾಜ್ಯದಲ್ಲಿ ಕೋವಿಡ್-19ರ ಮುಂಜಾಗ್ರತಾ ಕ್ರಮವನ್ನು ಕೈಗೊಂಡು ಎಸ್ಸೆಸ್ಸೆಲ್ಸಿ ತರಗತಿ ಪರೀಕ್ಷೆಗಳನ್ನು ಮುಂದೂಡಿ ಎಲ್ಲ ಶಿಕ್ಷಕರು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪಾಠ ಪ್ರವಚನ ಮಾಡಬೇಕೇಂದು ಆದೇಶ ಹೊರಡಿಸಿತ್ತು. ಆದರೆ, ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಹಲವು ಗ್ರಾಮೀಣ ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ವಿಡಿಯೊ ತರಗತಿ ಮಾಡಲು ಸಾಧ್ಯವಾಗುತ್ತಿಲ್ಲ.

ಇವೆಲ್ಲವನ್ನು ಮನಗಂಡ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾಥಿಗಳಿಗೆ ಪರೀಕ್ಷಾ ದೃಷ್ಟಿಯಿಂದ ಶಿಕ್ಷಕರು ಮನೆಮನೆಗೆ ತೆರಳಿ ಪಾಠ ಪ್ರವಚನ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ.

ರಾಜ್ಯ ಸರ್ಕಾರ ಜೂನ್ 25 ರಿಂದ ಹತ್ತನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ನಿಗದಿಪಡಿಸಿದ್ದು, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ನಿರ್ಧರಿಸಿ ಶಾಲೆಯ ಶಿಕ್ಷಕರು ಮನೆಮನೆಗೆ ತೆರಳಿ ಪಾಠ-ಪ್ರವಚನ ಮಾಡುತ್ತಿರುವ ಬಗ್ಗೆ ಪೋಷಕರಲ್ಲಿ ಸಂತಸ ತಂದಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ಪುಸ್ತಕ ಹಿಡಿಯದ ಹಲವು ವಿದ್ಯಾರ್ಥಿಗಳು ಇದೀಗ ಸ್ವತ: ಶಿಕ್ಷಕರೇ ಮನೆಗೆ ಧಾವಿಸಿ ತರಗತಿ ಮಾಡುತ್ತಿರುವುದರಿಂದ ಮಕ್ಕಳಲ್ಲಿ ಹೆಚ್ಚಿನ ಆಸಕ್ತಿ ಮೂಡಿದೆ. ಮಕ್ಕಳಲ್ಲಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿಯ ಜೊತೆಯಲ್ಲಿ ಪರೀಕ್ಷಾ ದೃಷ್ಟಿಯಿಂದ ಉಪಯುಕ್ತವಾದ ವಿಷಯ, ಮಕ್ಕಳಲ್ಲಿದ್ದ ಆತಂಕವನ್ನು ದೂರ ಮಾಡಿ ಅವರಲ್ಲಿ ಧೈರ್ಯ ತುಂಬಿ ತಮ್ಮ ವಿಷಯದ ತರಗತಿಗಳನ್ನು ಕಲಿಸಿ ಜೊತೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಧರಿಸಿ, ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಈ ಬಾರಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ 44 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಶೇ.100 ಫಲಿತಾಂಶಕ್ಕಾಗಿ ಈ ರೀತಿಯ ವಿನೂತನ ಬೋಧನೆಯನ್ನು ಶಿಕ್ಷಕರು ಮಾಡುತ್ತಿದ್ದಾರೆ. ಮುಖ್ಯ ಶಿಕ್ಷಕಿ ಕೆ.ಎಸ್.ಇಂದಿರಾ, ಶಿಕ್ಷಕರಾದ ದಿನೇಶ್ ಅಡ್ಮಾನಿ, ಗುರುರ್ಕಿ, ರಾಜಶಂಕರ್, ಶೋಭಾ ಸೇರಿದಂತೆ ಇತರರು ಮನೆಗಳಿಗೆ ತೆರಳಿ ಪೋಷಕರೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳೊಂದಿಗೆ ಬೆರೆಯುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT