ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ಯಾರಂಟಿ ಯೋಜನೆಗೆ ಮಾನದಂಡವಿರಲಿ: ಕಾಡ್ಯಮಾಡ ಮನುಸೋಮಯ್ಯ

Published 17 ಜೂನ್ 2024, 13:41 IST
Last Updated 17 ಜೂನ್ 2024, 13:41 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಡೀಕರಿಸುವುದಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸಿರುವುದು ಸಮರ್ಥನೀಯವಲ್’ಲ ಎಂದು ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ದೂರಿದ್ದಾರೆ.

‘ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕು. ಆದರೆ ಅವೈಜ್ಞಾನಿಕವಾಗಿರುವ ಈ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆ ಬೀಳುತ್ತಿದೆ. ಇದನ್ನು ಸರಿದೂಗಿಸುವುದಕ್ಕಾಗಿ ಇಂಧನ ಬೆಲೆ ಹೆಚ್ಚಿಸಿರುವುದರಿಂದ ಜನ ಸಾಮಾನ್ಯರ ಮೇಲೆ ಹೊರೆ ಹೊರಿಸಿದಂತಾಗಿದೆ. ಇಂಧನ ಬೆಲೆ ಹೆಚ್ಚಳದಿಂದ ಸರಕು ಸಾಗಣೆ ದರ ಹೆಚ್ಚಾಗಿ ಎಲ್ಲ ವಸ್ತುಗಳ ಬೆಲೆಯೂ ಏರಲಿದೆ. ಈ ಕಾರಣದಿಂದ ಕೂಡಲೇ ಸರ್ಕಾರ ಇಂಧನ ಮೇಲಿನ ಹೆಚ್ಚುವರಿ ತೆರಿಗೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದರು.

‘ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಮಾನದಂಡ ನಿಗದಿಪಡಿಸಬೇಕು. ಉಳ್ಳವರು ಮತ್ತು ಇಲ್ಲದವರನ್ನು ಒಂದೇ ತಕ್ಕಡಿಯಲ್ಲಿ ತೂಗಬಾರದು. ಇದರಿಂದ ಸರ್ಕಾರದ ಹಣಕಾಸಿನ ಹೊರೆಯನ್ನು ತುಸು ತಗ್ಗಿಸಬಹುದು. ಇದನ್ನು ಬಿಟ್ಟು ಇಂಧನ ಮೇಲೆ ತೆರಿಗೆ ವಿಧಿಸುವುದು ಉತ್ತಮ ಬೆಳವಣಿಗೆಯಲ್ಲ. ಈ ಸಂಬಂಧ ರಾಜ್ಯ ಸರ್ಕಾರದ ಸಚಿವರು ಹೊರ ರಾಜ್ಯಗಳ ಬೆಲೆ ನೀಡಿ ಬೆಲೆ ಏರಿಕೆಯನ್ನು ಸಮರ್ಥಿಸಿ ಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT