ಶನಿವಾರ, ಜನವರಿ 18, 2020
21 °C

ವಿದ್ಯುತ್‌ ಪ್ರವಹಿಸಿ ಲೈನ್‌ಮನ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಸೋಮವಾರ ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್‌ಮನ್‌ ಸಾವನ್ನಪ್ಪಿದ್ದಾರೆ.

ಸಿ.ಆರ್‌.ಯೋಗೇಶ್‌ (25) ಸಾವನ್ನಪ್ಪಿದ ಲೈನ್‌ಮನ್‌.

’ಹಾಸನ ಜಿಲ್ಲೆಯ ಅರಸೀಕೆರೆಯ ಯೋಗೇಶ್‌ ಕಳೆದ 4 ವರ್ಷಗಳಿಂದ ಚೆಂಬು ಗ್ರಾಮ ವ್ಯಾಪ್ತಿಯಲ್ಲಿ ಲೈನ್‌ಮನ್‌ ಆಗಿ ಕೆಲಸ ಮಾಡುತ್ತಿದ್ದರು.

ಆನೆಹಳ್ಳ ಸಮೀಪದ ಹೊಸೂರು ಗೋಪಾಲಕೃಷ್ಣ ಅವರ ತೋಟದಲ್ಲಿ ವಿದ್ಯುತ್ ಕಂಬವನ್ನೇರಿ ಕೆಲಸ ಮಾಡುತ್ತಿರುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಯಿತು.

‘ವಿದ್ಯುತ್‌ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಮಾಹಿತಿ ನೀಡಿದ್ದೆವು. ತಕ್ಷಣವೇ ಸ್ಥಳಕ್ಕೆ ಬಂದ ಯೋಗೇಶ್‌ ಕೆಲಸ ಆರಂಭಿಸಿದ್ದರು. ಆದರೆ, ಕಂಬವನ್ನೇರಿದ ಕ್ಷಣಾರ್ಧದಲ್ಲಿ ವಿದ್ಯುತ್‌ ಪ್ರವಹಿಸಿ ಕೆಳಗೆ ಬಿದ್ದು ಸಾವನ್ನಪ್ಪಿದರು. ಅವರು ಉತ್ತಮ ಕೆಲಸಗಾರ. ಗ್ರಾಮಸ್ಥರ ಸಮಸ್ಯೆಗೆ ಸದಾ ಸ್ಪಂದಿಸುತ್ತಿದ್ದರು’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು