ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಲೋಕಸಭಾ ಚುನಾವಣೆ | ನಾನೂ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌

Published 6 ಫೆಬ್ರುವರಿ 2024, 15:34 IST
Last Updated 6 ಫೆಬ್ರುವರಿ 2024, 15:34 IST
ಅಕ್ಷರ ಗಾತ್ರ

ಮಡಿಕೇರಿ: ‘ಲೋಕಸಭಾ ಚುನಾವಣೆಗೆ‌ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ’ ಎಂದು‌ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಪ್ರತಿಪಾದಿಸಿದರು.

‘ನಾನೊಬ್ಬನೇ ಪಕ್ಷಾಂತರ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಹುತೇಕ ರಾಜಕಾರಣಿಗಳು ಬೇರೆ ಬೇರೆ‌ ಪಕ್ಷಗಳಲ್ಲಿದ್ದವರೇ. ನಾನು ಯಾರಿಂದಲೂ, ಯಾವುದನ್ನೂ ಮುಚ್ಚಿಟ್ಟಿಲ್ಲ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ನನಗೂ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯವಾಗಿ ಪ್ರೋತ್ಸಾಹ ನೀಡಿದ್ದಾರೆ’ ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ದೇಶದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದ್ದು, ಎದುರಾಳಿಗಳನ್ನು ವೈರಿಗಳಂತೆ ಪರಿಗಣಿಸಿ, ಜಾರಿ ನಿರ್ದೇಶನಾಲಯದ ಮೂಲಕ ದ್ವೇಷ ಸಾಧಿಸಲಾಗುತ್ತಿದೆ. ಇದು ನಿಜಕ್ಕೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ ಎಂದರು‌.

‘ದಕ್ಷಿಣ ಭಾರತದ ಜನರ ಹಣ ಉತ್ತರ ಭಾರತದ ಕಡೆಗೆ ಹರಿಯುತ್ತಿದೆ. ಈ ದೇಶದ ಅಸ್ಮಿತೆಯಾಗಿರುವ ಶ್ರೀರಾಮ ಒಂದು ಪಕ್ಷಕ್ಕೆ ಮಾತ್ರ ಸೀಮಿತವಾಗಿ, ಮುಂಬರುವ ಚುನಾವಣೆಯ ವಿಷಯವಾಗಿರುವುದು ಸರಿಯಲ್ಲ’ ಎಂದು ಟೀಕಿಸಿದರು.

‘ಜವಾಹರಲಾಲ್‌ ನೆಹರೂ ಕುರಿತು ಪ್ರಧಾನಿ ಮೋದಿ ಟೀಕಿಸಿರುವುದು ತಪ್ಪು. ನೆಹರು ಅವರು ಮೊದಲ ಪ್ರಧಾನಿಯಾದಾಗ ದೇಶದ ಜನರಿಗೆ ಊಟವೇ ಇರಲಿಲ್ಲ. ಆಗ ಅಣೆಕಟ್ಟುಗಳನ್ನು ಕಟ್ಟಿ, ಇಲ್ಲಿ ಆಹಾರ ಉತ್ಪಾದನೆ ಹೆಚ್ಚಾಗುವಂತೆ ಮಾಡಿದ್ದನ್ನು ಎಂದಿಗೂ ಮರೆಯಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT