ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಳೆದ ಬಾರಿಗಿಂತ ಪ್ರತಿ ಮತಗಟ್ಟೆಯಲ್ಲೂ ಹೆಚ್ಚು ಮತ ಬರಲಿ’

ಮಡಿಕೇರಿ ಬ್ಲಾಕ್, ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರ ಸಭೆಯಲ್ಲಿ ಧರ್ಮಜ ಉತ್ತಪ್ಪ ಸೂಚನೆ
Published 7 ಏಪ್ರಿಲ್ 2024, 5:02 IST
Last Updated 7 ಏಪ್ರಿಲ್ 2024, 5:02 IST
ಅಕ್ಷರ ಗಾತ್ರ

ಮಡಿಕೇರಿ: ಮಡಿಕೇರಿ ಬ್ಲಾಕ್‌ನಲ್ಲಿ ಒಟ್ಟು 72 ಮತಗಟ್ಟೆಗಳಿವೆ. ಇಲ್ಲಿ ಕಳೆದ ಬಾರಿ ಕಾಂಗ್ರೆಸ್ ಪಕ್ಷ ಗಳಿಸಿದಕ್ಕಿಂತ ಹೆಚ್ಚು ಮತಗಳು ಬರುವಂತೆ ಮಾಡಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಕಾರ್ಯರ್ತರಿಗೆ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರ, ಬಿಎಲ್‍ಎಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರ ಗೆಲುವಿಗೆ ಪ್ರತಿ ಮತಗಟ್ಟೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಬಿಎಲ್‍ಎಗಳು ವಲಯ ಬ್ಲಾಕ್ ಮತ್ತು ಜಿಲ್ಲಾಮಟ್ಟದ ಪಕ್ಷದ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರು ಶಕ್ತಿ ಮೀರಿ ಶ್ರಮಿಸಬೇಕು ಎಂದು ಹೇಳಿದರು.

ಕೊಡಗು ಜಿಲ್ಲಾ ಕಾಂಗ್ರೆಸ್‍ನ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ‘ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಪಕ್ಷ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗುವುದಾಗಿ ಮತದಾರರಿಗೆ ಗ್ಯಾರಂಟಿ ಕಾರ್ಡ್‍ಗಳನ್ನು ನೀಡಿ ಅವರೆಲ್ಲರ ಬೆಂಬಲದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂತು. ನುಡಿದಂತೆ ನಡೆದ ಸರ್ಕಾರ 5 ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಉಚಿತ ಪ್ರಯಾಣ ಮತ್ತು ಪದವೀಧರ ಹಾಗೂ ಡಿಪ್ಲೊಮೊ ಪಡೆದವರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಈ ವಿಷಯವನ್ನು ಕಾರ್ಯಕರ್ತರು ಪ್ರತಿ ಮನೆಗೂ ತಿಳಿಸಬೇಕು ಎಂದು ತಿಳಿಸಿದರು.

ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 5 ಪ್ರಮುಖ ಗ್ಯಾರಂಟಿಗಳೊಂದಿಗೆ 20 ವಿಶೇಷ ಕಾರ್ಯಕ್ರಮಗಳನ್ನು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಅದರಲ್ಲಿ 5 ಭಾಗ್ಯಗಳಾದ ಯುವ ನ್ಯಾಯ, ಪಾಲುದಾರಿಕೆ ನ್ಯಾಯ, ಮಹಿಳಾ ನ್ಯಾಯ, ಶ್ರಮಿಕ ನ್ಯಾಯ ಹಾಗೂ ರೈತರ ಸಾಲಮನ್ನಾ ನ್ಯಾಯವನ್ನು ಸೇರಿಸಿದೆ. ಈ ವಿಚಾರವನ್ನೂ ತಿಳಿಸಬೇಕು ಎಂದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ, ನಗರಾಧ್ಯಕ್ಷ ಬಿ.ವೈ.ರಾಜೇಶ್, ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ನಟೇಶ್ ಗೌಡ, ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಹನೀಫ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಮಿತಿ ಸಂಯೋಜಕ ತೆನ್ನಿರಾ ಮೈನಾ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಭಾಗವಹಿಸಿದ್ದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರ ಬಿಎಲ್‍ಎಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರ ಬಿಎಲ್‍ಎಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT