ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ 19 ಕ್ಷೇತ್ರಗಳಲ್ಲಿ ಎಸ್‌ಯುಸಿಐ ಸ್ಪರ್ಧೆ: ಬಿ.ರವಿ

Published 2 ಏಪ್ರಿಲ್ 2024, 15:07 IST
Last Updated 2 ಏಪ್ರಿಲ್ 2024, 15:07 IST
ಅಕ್ಷರ ಗಾತ್ರ

ಮಡಿಕೇರಿ: ‘ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷವು ದೇಶದ 3 ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ 19 ರಾಜ್ಯಗಳ 151 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ರಾಜ್ಯದ 19 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ’ ಎಂದು ಪಕ್ಷದ ರಾಜ್ಯ ಸಮಿತಿ ಸದಸ್ಯ ಬಿ.ರವಿ ತಿಳಿಸಿದರು.

‘ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ’ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಎನ್‌ಡಿಎ ಮತ್ತು ಐಎನ್‌ಡಿಎ ಎರಡು ಒಕ್ಕೂಟಗಳೂ ಬಂಡವಾಳಶಾಹಿಗಳ ಎರಡು ಪರ್ಯಾಯಗಳಾಗಿವೆ. ದುರಂತವೆಂದರೆ, ಸಿಪಿಐ, ಸಿಪಿಐಎಂ ಸೇರಿದಂತೆ ಎಡಪಕ್ಷಗಳು ಲೋಕಸಭಾ ಸ್ಥಾನದ ಆಸೆಗಾಗಿ ಐಎನ್‌ಡಿಎ ಮೈತ್ರಿಕೂಟ ಸೇರಿವೆ. ಇಂತಹ ಪರಿಸ್ಥಿತಿಯಲ್ಲಿ, ಶೋಷಿತ ಜನರ ನೈಜ ಹೋರಾಟದ ಪ್ರತಿನಿಧಿಯಾಗಿ ಎಸ್‌ಯುಸಿಐಸಿ ಸ್ಪರ್ಧಿಸುತ್ತಿದೆ’ ಎಂದು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT