ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಮತದಾನದ ಹೆಚ್ಚಳಕ್ಕೆ ‘ಸ್ವೀಪ್‌’ನಿಂದ ಹಲವು ಕಾರ್ಯಕ್ರಮ

ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ
Published 28 ಮಾರ್ಚ್ 2024, 4:36 IST
Last Updated 28 ಮಾರ್ಚ್ 2024, 4:36 IST
ಅಕ್ಷರ ಗಾತ್ರ

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಮಾರ್ಚ್ 28ರಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ವರ್ಣಿತ್ ನೇಗಿ ತಿಳಿಸಿದರು.

ಇಲ್ಲಿ ಬುಧವಾರ ಅವರು ವಿಡಿಯೊ ಸಂವಾದದ ಮೂಲಕ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚೆ ನಡೆಸಿದರು.

ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಿ ಮತದಾನ ಹೆಚ್ಚಳಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅವರು ನಿರ್ದೇಶನ ನೀಡಿದರು.

ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದರೆ ಕೂಡಲೇ ‘ಸಿ-ವಿಜಿಲ್’ ಆ್ಯಪ್ ಮೂಲಕ ದೂರು ದಾಖಲಿಸಬೇಕು ಎಂದು ಅವರು ಸೂಚಿಸಿದರು.

ಅಧಿಕಾರಿಗಳು ತಂಡೋಪಾದಿಯಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಲ್ಲರೂ ಒಟ್ಟುಗೂಡಿ ಮತದಾನ ಹೆಚ್ಚಳಕ್ಕೆ ಶ್ರಮಿಸಬೇಕು ಎಂದರು.

ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಶೇಖರ್ ಮಾತನಾಡಿ, ‘ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮತದಾನದ ಮಹತ್ವ ಕುರಿತು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ನಗರಸಭೆ ಪೌರಾಯುಕ್ತ ವಿಜಯ್, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್ ಇತರರು ತಮ್ಮ ವ್ಯಾಪ್ತಿಯಲ್ಲಿ ಕಾರ್ಯಚಟುವಟಿಕೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT