ಮಡಿಕೇರಿ: ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ ಹಾಗೂ ಹಾರಂಗಿ ಜಲಾಶಯದ ಅಧೀಕ್ಷಕ ಎಂಜಿನಿಯರ್ ರಘುಪತಿ ಅವರ ನಿವಾಸದ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ನಂಜುಂಡೇಗೌಡ ಅವರ ಇಲ್ಲಿನ ನಿವಾಸ ಹಾಗೂ ಕಚೇರಿ, ಮೈಸೂರಿನ ಇವರ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಹಾರಂಗಿ ಜಲಾಶಯದ ಅಧೀಕ್ಷಕ ಎಂಜಿನಿಯರ್ ರಘುಪತಿ ಅವರ ಮೈಸೂರಿನ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಮೈಸೂರು ವಿಭಾಗದ ಎಸ್.ಪಿ.ಸುರೇಶ್ ಬಾಬು ‘ಪ್ರಜಾವಾಣಿ’ ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.