ಸೋಮವಾರಪೇಟೆ ಕಡೆಯಿಂದ ಮಾದಾಪುರ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಸೋಮವಾರ ಪೇಟೆ ಕಡೆಗೆ ಹೋಗುತ್ತಿದ್ದ ಮಿನಿ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಎರಡೂ ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದ್ದು ಲಾರಿಯ ಚಾಲಕ ಸೇರಿದಂತೆ ಮೂವರಿಗೆ ಗಾಯಗಳಾಗಿ ಚಾಲಕನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.