ಗುರುವಾರ , ಮೇ 6, 2021
32 °C

ಕೊಡಗು: ಅಪಘಾತದಲ್ಲಿ ಹೊತ್ತಿ ಉರಿದ ಲಾರಿ-ಕಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಪಘಾತದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿರುವ ಲಾರಿ

ಸುಂಟಿಕೊಪ್ಪ (ಕೊಡಗು ಜಿಲ್ಲೆ): ಸಮೀಪದ ಕೆದಕಲ್ ಬಳಿ, ಲಾರಿ ಹಾಗೂ ಕಾರಿನ ನಡುವೆ ಗುರುವಾರ ನಸುಕಿನಲ್ಲಿ ಅಪಘಾತ ಸಂಭವಿಸಿ ಎರಡು ವಾಹನಗಳು ಹೊತ್ತಿ ಉರಿದಿವೆ. ಲಾರಿ ಹಾಗೂ ಕಾರು ಸಂಪೂರ್ಣ ಸುಟ್ಟು ಕರಕಲಾಗಿವೆ.

ಲಾರಿಯಲ್ಲಿ ಟೈಯರ್ ತುಂಬಿದ್ದರಿಂದ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿಕೊಂಡಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೂರು ಅಗ್ನಿ ಶಾಮಕ ದಳದ ವಾಹನಗಳಲ್ಲಿ ಬಂದ ಸಿಬ್ಬಂದಿ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಈ ಅವಘಡದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಸುಂಟಿಕೊಪ್ಪ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಪೂರ್ಣ ಸುಟ್ಟು ಬಣ್ಣ ಕಳೆದುಕೊಂಡಿರುವ ಕಾರು

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು