ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾತೃ ಭಾಷೆ ಪ್ರೀತಿಸಿ, ಗೌರವಿಸಿ’

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಲೋಕೇಶ್‌ ಸಾಗರ್‌ ಕರೆ
Last Updated 5 ಡಿಸೆಂಬರ್ 2019, 12:49 IST
ಅಕ್ಷರ ಗಾತ್ರ

ಮಡಿಕೇರಿ: ‘ವಿದ್ಯಾರ್ಥಿಗಳು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಪತ್ರಿಕೆ ಹಾಗೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್‌ ಸಾಗರ್‌ ಇಲ್ಲಿ ಕರೆ ನೀಡಿದರು.

ಮದೆನಾಡಿನ ಮದೆಮಹೇಶ್ವರ ಪದವಿ ಪೂರ್ವ ಕಾಲೇಜಿನ ಪೋಷಕ-ವಿದ್ಯಾರ್ಥಿಗಳ ಸಭೆ ಹಾಗೂ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎನ್. ಮಹಾಬಲೇಶ್ವರ ಭಟ್ ದತ್ತಿ ಉಪನ್ಯಾಸದಲ್ಲಿ ಅವರು ಮಾತನಾಡಿದರು.

‘ಮಾತೃ ಭಾಷೆ ಪ್ರೀತಿಸುವುದರೊಂದಿಗೆ ಕನ್ನಡ ಭಾಷೆಗೆ ಗೌರವ ನೀಡಬೇಕು. ಸಾಹಿತ್ಯ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

ಮಡಿಕೇರಿ ಡಿವೈಎಸ್‌ಪಿ ಬಾರಿಕೆ ದಿನೇಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಶೋಕಿಗೋಸ್ಕರ ಕಾನೂನು ಉಲ್ಲಂಘನೆ ಮಾಡಬಾರದು. ಮಕ್ಕಳ ರಕ್ಷಣೆಗಾಗಿಯೇ ಪ್ರತ್ಯೇಕ ಕಾನೂನುಗಳಿವೆ ಅವುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ಸೇವೆಗೆ ಉತ್ತಮ ಅವಕಾಶಗಳಿವೆ. ಸದುಪಯೋಗ ಪಡಿಸಿಕೊಳ್ಳಬೇಕು. ಓದಿನೊಂದಿಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಸಲಹೆ ಮಾಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ. ಪ್ರೌಢಾವಸ್ಥೆಯು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಗೆ ಸಕಾಲ. ಈ ಹಂತದಲ್ಲಿ ಕಲಿಯುವ ವಿಚಾರಗಳು ಭವಿಷ್ಯದಲ್ಲಿ ನೆರವಾಗಲಿದೆ ಎಂದರು.

ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವುದರಿಂದ ಸಾಕಷ್ಟು ವಿಚಾರ ಮನನ ಮಾಡಿಕೊಳ್ಳಲು ಸಾಧ್ಯ. ಜೊತೆಯಲ್ಲಿ ಬರಹ, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಹೊರ ಪ್ರಪಂಚದಲ್ಲಿ ಗುರುತಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಹುದೇರಿ ರಾಜೇಂದ್ರ ಅವರು, ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಸಿ.ಚೆನ್ನಪ್ಪ, ನಿರ್ದೇಶಕ ಹುಲಿಮನೆ ರಾಮಣ್ಣ ಮಾತನಾಡಿದರು.

ಇದೇ ಸಂದರ್ಭದಲ್ಲಿ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡೆ, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ, ಪೋಷಕರ ಹಾಗೂ ವಿದ್ಯಾರ್ಥಿಗಳ ಸಭೆ ನಡೆಯಿತು. ವಿದ್ಯಾರ್ಥಿಗಳಾದ ಮೇಘನಾ, ಇಂಚರಾ, ಧನ್ಯಶ್ರೀ ಪ್ರಾರ್ಥಿಸಿದರು. ಉಪನ್ಯಾಸಕ ಪರಶುರಾಮ ನಿರೂಪಿಸಿದರು,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT