ಭಾನುವಾರ, ಸೆಪ್ಟೆಂಬರ್ 20, 2020
21 °C

ಕೊಡಗು: ಲೆಫ್ಟಿನೆಂಟ್‌ ಜನರಲ್‌ ಬಿ.ಸಿ. ನಂದ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗಿನ ಹೆಮ್ಮೆಯ ವೀರಸೇನಾನಿ, ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಬಿದ್ಡಂಡ ಚಂಗಪ್ಪ ನಂದ ಅವರು (87) ಬುಧವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ನಿಧನರಾದರು. ಪತ್ನಿ ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. 

ಅಬ್ಬಿ ಜಲಪಾತದ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಗುರುವಾರ ಮಧ್ಯಾಹ್ನ ಸಕಲ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಿದ್ದಂಡ ಚೆಂಗಪ್ಪ–ಬೊಳ್ಳವ್ವ ಅವರ ಪುತ್ರನಾಗಿ ಮೇ 12, 1931ರಲ್ಲಿ ಜನಿಸಿದ್ದರು.

ಬೊಳ್ಳವ್ವ ಅವರು ಪೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಅವರ ಸಹೋದರಿ. 1951ರಿಂದ 1989ರ ತನಕ ಸೇನೆಯ ವಿವಿಧ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು. ನಂದ ಅವರ ನಿಧನಕ್ಕೆ ಸೇನಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು