ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾದಾಪಟ್ಟಣ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳವು

Published 30 ಮೇ 2024, 15:18 IST
Last Updated 30 ಮೇ 2024, 15:18 IST
ಅಕ್ಷರ ಗಾತ್ರ

ಕುಶಾಲನಗರ: ತಾಲೂಕಿನ ‌ಮಾದಾಪಟ್ಟಣ ಗ್ರಾಮದ ನಿವಾಸಿ ಪೊಲೀಸ್ ಕಾನ್‌ಸ್ಟೆಬಲ್ ಸುನಿಲ್ ಕುಮಾರ್ ಎಂಬುವರ ಮನೆ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾ ಒಡೆದು ₹15 ಸಾವಿರ ನಗದು ಹಾಗೂ 40 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ.

ಇದೇ ಮನೆಯ ಹಿಂಭಾಗದಲ್ಲಿರುವ ಮನೆಯಲ್ಲಿಯೂ ಕಳವಿಗೆ ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ವಿಧಿವಿಜ್ಞಾನ, ಹಾಗೂ ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆದರೆ ಕಳ್ಳರ ಸುಳಿವು ಮಾತ್ರ ಪತ್ತೆಯಾಗಿಲ್ಲ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT