ಮಡಿಕೇರಿ: ಇಲ್ಲಿನ ಗಾಂಧಿ ಭವನದಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಆಚರಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಶಂಕರಯ್ಯ ಅವರು ಅಗ್ನಿಬನ್ನಿರಾಯ ಸ್ವಾಮಿ ಕುರಿತು ಮಾತನಾಡಿದರು.

ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಶ್ರೇಷ್ಠ ಗುರುಗಳು ಅಗ್ನಿಬನ್ನಿರಾಯರು. ಈ ಸಮಾಜದವರು ದುಡಿಮೆಗೆ ಹೆಚ್ಚಿನ ಆದ್ಯತೆ ನೀಡುವ ಶ್ರಮಜೀವಿಗಳು ಮಾತ್ರವಲ್ಲ ಕಾಯಕನಿಷ್ಠರೂ ಆಗಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಲಾಲ್ಭಾಗ್ ಉದ್ಯಾನ ಸೇರಿದಂತೆ ಹಲವು ನಿರ್ಮಾಣ ಕಾರ್ಯದಲ್ಲಿ ಈ ಸಮುದಾಯವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇವರು ಆಚರಿಸುವ ಬೆಂಗಳೂರಿನ ಕರಗ ಸುಪ್ರಸಿದ್ಧವಾದುದು ಎಂದು ಹೇಳಿದರು.

ಬ್ಲಾಸಂ ಶಾಲೆಯ ಮುಖ್ಯ ಶಿಕ್ಷಕಿ ಅನಸೂಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಮಣಜೂರು ಮಂಜುನಾಥ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-51-616685527

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.