ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುರಸ್ತಿ ಆಗದಿದ್ದರೆ ಮಡಿಕೇರಿ ಬಂದ್: ಎಚ್ಚರಿಕೆ

Last Updated 6 ಡಿಸೆಂಬರ್ 2019, 12:57 IST
ಅಕ್ಷರ ಗಾತ್ರ

ಮಡಿಕೇರಿ: ನಗರದ ರಸ್ತೆಗಳನ್ನು ಇದೇ 15ರ ಒಳಗೆ ದುರಸ್ತಿ ಮಾಡದಿದ್ದರೆ ನಗರ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ವೀರನಾಡು ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಎಚ್ಚರಿಕೆ ನೀಡಿದರು.

ಮಳೆಗಾಲ ಕಳೆದು ಬಿಸಿಲಿನ ವಾತಾವರಣ ಮೂಡಿದ್ದರೂ ರಸ್ತೆ ದುರಸ್ತಿಯ ಬಗ್ಗೆ ನಗರಸಭೆ ಕಾಳಜಿ ತೋರುತ್ತಿಲ್ಲ. ವಿವಿಧ ಸಂಘ, ಸಂಸ್ಥೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ಅನೇಕ ಪ್ರತಿಭಟನೆಗಳನ್ನು ನಡೆಸಿದ್ದರೂ ಜಿಲ್ಲಾಡಳಿತದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ನಗರದಲ್ಲಿ ಉತ್ತಮ ವಾತಾವರಣವಿದ್ದರೂ ರಸ್ತೆಗಳ ಡಾಮರೀಕರಣಕ್ಕೆ ನಗರಸಭೆಯ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಯಾವುದೇ ಆಸಕ್ತಿ ತೋರಿಲ್ಲ. ನಿರಂತರವಾಗಿ ಮಳೆಯ ನೆಪವೊಡ್ಡುತ್ತಾ ಬಂದಿರುವ ಅಧಿಕಾರಿಗಳು ಡಿಸೆಂಬರ್ ತಿಂಗಳಿನಲ್ಲೂ ಕಾಮಗಾರಿ ಆರಂಭಿಸುವ ಲಕ್ಷಣ ಕಾಣುತ್ತಿಲ್ಲ ಎಂದು ಹರೀಶ್ ಜಿ.ಆಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಭರವಸೆ ಹುಸಿಯಾದರೆ ಬಂದ್ ನಡೆಸುವುದು ಖಚಿತ. ಚೇಂಬರ್ ಆಫ್ ಕಾಮರ್ಸ್, ಆಟೊ ಮಾಲೀಕರ ಮತ್ತು ಚಾಲಕರ ಸಂಘ, ಟ್ಯಾಕ್ಸಿ ಮಾಲೀಕರ ಮತ್ತು ಚಾಲಕರ ಸಂಘ, ಖಾಸಗಿ ಬಸ್ ಮಾಲೀಕರ ಮತ್ತು ಕಾರ್ಮಿಕರ ಸಂಘ ಸೇರಿದಂತೆ ಎಲ್ಲಾ ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳ ಸಹಕಾರ ಕೋರಿ ಸಾರ್ವಜನಿಕರ ಬೆಂಬಲದೊಂದಿಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು. ಅಲ್ಲದೇ ನಗರಸಭೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT